More

    ಮೂಲ ಸೌಕರ್ಯ ಸಮಸ್ಯೆಗಳ ನಿವಾರಣೆ

    ಗೊರೇಬಾಳ: ಕಾಂಗ್ರೆಸ್ ಸರ್ಕಾರದ ಜನೋಪಯೋಗಿ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

    ಗೊರೇಬಾಳ ಕ್ಯಾಂಪಿನ ಗಣೇಶ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಕುಡಿವ ನೀರು, ರಸ್ತೆ, ವಿದ್ಯುತ್ ಇತ್ಯಾದಿ ಮೂಲ ಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗಾಗಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

    ಇದನ್ನೂ ಓದಿ: ಅಂಗನವಾಡಿಗಳ ಅಭಿವೃದ್ಧಿಗೆ ಆದ್ಯತೆ, ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ

    ಗೊರೇಬಾಳ ಕ್ಯಾಂಪಿನಿಂದ ಗಾಂಧಿನಗರ ಗ್ರಾಮದವರೆಗೆ ತುಂಗಭದ್ರಾ ಎಡದಂಡೆ 36ನೇ ಕಾಲುವೆ ಬದಿ 7ಮೀಟರ್ ಅಗಲದ ಸಿಸಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಈ ಕುರಿತು ಆಕ್ಷೇಪಣೆ ಸಲ್ಲಿಸಬಹುದು ಎಂದರು.

    ಕಾಮಗಾರಿಗೆ ಯಾರೂ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಜೆಜೆಎಂ ಯೋಜನೆಯಡಿ ಪೈಪ್‌ಲೈನ್ ಕಾಮಗಾರಿ ಕೈಗೊಳ್ಳಲಾಗಿದ್ದು, ಗ್ರಾಮಸ್ಥರು ಸಹಕಾರ ನೀಡಬೇಕೆಂದು ಕೋರಿದರು. ಜೆಜೆಎಂ ಯೋಜನೆಯಡಿ 2.8 ಕೋಟಿ ರೂ. ವೆಚ್ಚದಲ್ಲಿ 754 ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ಕೆರೆ ನಿರ್ಮಾಣ ಹಾಗೂ ಇತರ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

    ತುಂಗಭದ್ರಾ ನದಿ ಪಾತ್ರದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ನೀರಿನ ಅಭಾವ ಎದುರಾಗುವ ಸಂಭವವಿದ್ದು, ರೈತರು ಮಿತವಾಗಿ ನೀರು ಬಳಸಬೇಕು. ನೀರಿನ ಕೊರತೆಯಾಗದಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೆರೆಗಳ ಭರ್ತಿಗೆ ಕ್ರಮಕೈಗೊಳ್ಳಬೇಕು. ಹಿರಿಯ ನಾಗರಿಕರಿಗೆ ಮಾಸಾಶನ ಸಮರ್ಪಕವಾಗಿ ತಲುಪಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಬಾದರ್ಲಿ ಸೂಚಿಸಿದರು.

    ರಸ್ತೆ, ನಿವೇಶನ ಮಂಜೂರು, ಮನೆಗಳ ಹಂಚಿಕೆ ಬಗ್ಗೆ ಜನರು ಮನವಿ ಸಲ್ಲಿಸಿದರು. ಕಂದಾಯ ನಿರೀಕ್ಷಕ ವೀರೇಶ ಬಾಬು, ಗ್ರಾಮ ಲೆಕ್ಕಾಧಿಕಾರಿ ಶ್ರೀನಿವಾಸ, ಪಿಡಿಒ ವೆಂಕೋಬ, ಪ್ರಮುಖರಾದ ಎಂ.ರಂಗನಗೌಡ, ಎನ್.ವೆಂಕಟೇಶ್ವರ ರಾವ್, ರಾಮಸ್ವಾಮಿ, ಪಾಸ್ಟರ್ ರಾಜು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts