17.8 C
Bengaluru
Wednesday, January 22, 2020

ಮಾತೃಸಮಾನವಾದ ಗೋರಕ್ಷಣೆ ಹೊಣೆ: ಡಾ.ಡಿ.ವೀರೇಂದ್ರ ಹೆಗ್ಗಡೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಮಂಗಳೂರು: ಬೇರೆಲ್ಲ ವಸ್ತುಗಳಿಗೆ ಪರ್ಯಾಯವಿದೆ, ಆದರೆ ಅಮೃತ ಸಮಾನವಾದ ಹಾಲಿಗೆ ಪರ್ಯಾಯವಿಲ್ಲ. ತಾಯಿ ಸಮಾನವಾದ ಗೋವುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.

ವಿಶ್ವ ಹಿಂದು ಪರಿಷತ್ ಸೇವಾ ಪ್ರಕಲ್ಪವಾದ ಗೋವನಿತಾಶ್ರಯ ಟ್ರಸ್ಟ್ ಮಂಗಳೂರು ವತಿಯಿಂದ ಟ್ರಸ್ಟ್‌ನ 20 ಸಂವತ್ಸರಗಳ ಸಾರ್ಥಕ ಗೋಸೇವೆ ಅಂಗವಾಗಿ ನಗರದ ಕೇಂದ್ರ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಬೃಹತ್ ಗೋಮಂಡಲ’ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಯಾವುದೇ ತ್ಯಾಜ್ಯವನ್ನು ಗೋವಿಗೆ ಹಾಕಿದರೂ ಅದು ಶುದ್ಧ ಬಿಳಿಯ ಹಾಲನ್ನೇ ನೀಡುತ್ತದೆ, ಜೀವನದ ಪ್ರತಿ ಸಂದರ್ಭದಲ್ಲಿ ಗೋವಿನ ಹಾಲು ಮತ್ತು ಹಾಲಿನ ಉತ್ಪನ್ನಗಳು ಜನರಿಗೆ ಬೇಕು. ಉತ್ತರ ಕರ್ನಾಟಕದಲ್ಲಿ ನೆರೆ ಬಂದಾಗ ಅಲ್ಲಿನ ಜನರು ಮನೆಗೆ ಆಹಾರ, ಬಟ್ಟೆ, ಮನೆ ನೀಡಿ ಎಂದು ಕೇಳಲಿಲ್ಲ. ಬದಲಿಗೆ ತಕ್ಷಣಕ್ಕೆ ನಮ್ಮ ಗೋವುಗಳಿಗೆ ಆಹಾರ ನೀಡಿ ಎಂದು ವಿನಂತಿಸಿದ್ದರು. ಇದು ಗೋವುಗಳ ಬಗ್ಗೆ ನಮಗಿರುವ ಕಾಳಜಿಯ ದ್ಯೋತಕ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 40 ಲಕ್ಷ ಮಂದಿ ಸದಸ್ಯರ ಪೈಕಿ 30 ಲಕ್ಷ ಮಂದಿ ಗೋಸಾಕಣೆ ಮೂಲಕ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಗೋವಿನ ಹಾಲು ಮಾರಾಟದ ಮೂಲಕ ರೈತರಿಗೆ ಪ್ರತಿನಿತ್ಯ ಕೈಗೆ ಆದಾಯ ದೊರೆಯುತ್ತಿದೆ ಎಂದರು.

ಗೋವಿನ ಮಹತ್ವ ಅರಿತು ಇಂದು ಎಲ್ಲರೂ ಗೋವು ಮತ್ತು ಅದರ ಉತ್ಪನ್ನಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಇನ್ನೊಂದೆಡೆ ಗೋವಿನ ಕಳ್ಳತನ ಸಮಸ್ಯೆಯನ್ನೂ ಎದುರಿಸುತ್ತಿದ್ದೇವೆ. ವಿದೇಶಿ ಹಾಲಿನ ಆಮದು ತಡೆ ಮೂಲಕ ಪ್ರಧಾನಮಂತ್ರಿ ರೈತರಿಗೆ ದೊಡ್ಡ ಉಪಕಾರ ಮಾಡಿದ್ದಾರೆ. ಗೋವಿನ ಸಂರಕ್ಷಣೆಗೆ ಗೋವನಿತಾಶ್ರಯ ಟ್ರಸ್ಟ್ ಉತ್ತಮ ಕಾರ್ಯ ಮಾಡುತ್ತಿದೆ. ಟ್ರಸ್ಟ್‌ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಕಾರ ನೀಡಲಾಗುವುದು ಎಂದರು.
ವಿಹಿಂಪ ಗೋರಕ್ಷಾ ವಿಭಾಗ ಕೇಂದ್ರೀಯ ಉಪಾಧ್ಯಕ್ಷ ಹುಕುಂಚಂದ್ ಸಾವಲಾಜಿ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಶಾಸಕ ಡಿ.ವೇದವ್ಯಾಸ ಕಾಮತ್, ವಿಹಿಂಪ ಕ್ಷೇತ್ರೀಯ ಪ್ರಚಾರಕ್ ಕೇಶವ ಹೆಗಡೆ, ವಿಹಿಂಪ ಸೇವಾ ಪ್ರಕಲ್ಪದ ಹಿರಿಯರಾದ ವಾಸುದೇವ ರಾಜ್, ಗೋವನಿತಾಶ್ರಯ ಟ್ರಸ್ಟ್‌ನ ಟ್ರಸ್ಟಿಗಳಾದ ಎಲ್.ಶ್ರೀಧರ ಭಟ್, ಹಿತೇಂದ್ರ ಜೆ. ಷಾ, ಕೋಶಾಧಿಕಾರಿ ಡಾ. ಅನಂತಲಕ್ಷ್ಮಿ ಭಟ್ ಉಪಸ್ಥಿತರಿದ್ದರು. ಗೋಮಂಡಲದ ಸ್ಮರಣ ಸಂಚಿಕೆ ‘ನಂದಿನಿ’ಯನ್ನು ಬಿಡುಗಡೆ ಮಾಡಲಾಯಿತು.
ಗೋವನಿತಾಶ್ರಯ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡಾ.ಪಿ.ಅನಂತಕೃಷ್ಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ವಂದಿಸಿದರು. ದಯಾನಂದ ಕಟೀಲ್ ನಿರೂಪಿಸಿದರು.

ಏನಿದೆ ಗೋಮಂಡಲದಲ್ಲಿ?
ಮಲೆನಾಡು, ಕಾಸರಗೋಡು ಗಿಡ್ಡ ಸಹಿತ ವಿವಿಧ ತಳಿಗಳ 100ಕ್ಕೂ ಅಧಿಕ ದನಕರುಗಳು, ಪ್ರವೇಶ ದ್ವಾರದಲ್ಲೇ ಸ್ವಾಗತಿಸುವ ನಂದಿ, ರಾಮನಗರದ ಕವಣಾಪುರ ಬಸವೇಶ್ವರ ಸ್ವಾಮಿ ಪುಣ್ಯಕ್ಷೇತ್ರದ ಬಸವಪ್ಪ ಸ್ವಾಮಿ(ಬಸವರೂಪಿ), ಶಾರದಾ ವಿದ್ಯಾಲಯದ ಚಿತ್ರಕಲಾ ಶಿಕ್ಷಕ ರೋಹಿತ್ ರಚಿಸಿರುವ ಅಯೋಧ್ಯೆ ರಾಮಮಂದಿರದ ಪ್ರತಿಕೃತಿ, ವೇದಿಕೆ ಪಾರ್ಶ್ವದ ಮಂಟಪದಲ್ಲಿ ಶ್ರೀಕೃಷ್ಣ ವಿಗ್ರಹಕ್ಕೆ ನಿರಂತರ ಪೂಜೆ, ಸಾರ್ವಜನಿಕರಿಂದ ಗೋಪೂಜೆ, ಶಿವಲಿಂಗದ ಬೃಹತ್ ಪ್ರತಿಕೃತಿ, ನಿರಂತರ ಭಜನಾ ಕಾರ್ಯಕ್ರಮ, ಶ್ರೀಕೃಷ್ಣ ವೇಷ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಯೋಗ ತರಬೇತಿ, ಗೋವಿಗೆ ಸಂಬಂಧಿಸಿದ ವಸ್ತುಗಳು, ಉತ್ಪನ್ನಗಳ ಮಳಿಗೆ ಎಲ್ಲವನ್ನೂ ವೀಕ್ಷಿಸಬಹುದು, ಪಾಲ್ಗೊಳ್ಳಬಹುದು.

ಭಾರತೀಯ ಜೀವನ ಪದ್ಧತಿಯಲ್ಲಿ ಗೋವಿಗೆ ಮಹತ್ವದ ಸ್ಥಾನವಿದೆ. ಭಾರತೀಯ ಗೋತಳಿಗಳ ಸಂರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಬೇಕು. ಅದರಲ್ಲೂ ಅತಿ ವಿಶಿಷ್ಟವಾದ ಪುಂಗನೂರು ತಳಿ ಅಳಿವಿನಂಚಿನಲ್ಲಿದ್ದು, ರಕ್ಷಣೆಯಾಗಬೇಕಿದೆ. ಗೋವುಗಳ ಸಂರಕ್ಷಣೆ ಮತ್ತು ಸಂವಂರ್ಧನೆಯಲ್ಲಿ ಗೋವನಿತಾಶ್ರಯ ಟ್ರಸ್ಟ್ ಕೆಲಸ ಉತ್ಕೃಷ್ಟವಾದುದು.
– ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ವಿದೇಶಿ ವಸ್ತುಗಳ ಭರಾಟೆಯಿಂದ ದೇಶೀಯ ವಸ್ತುಗಳು ಮತ್ತು ಗೋವಿನ ಉತ್ಪನ್ನಗಳ ಬಳಕೆ ಕಡಿಮೆಯಾಗುತ್ತಿದೆ. ಗೋವು ಮತ್ತು ಗೋವಿನ ಉತ್ಪನ್ನಗಳು ಪವಿತ್ರವಾಗಿದ್ದು, ಆರೋಗ್ಯದ ದೃಷ್ಟಿಯಿಂದಲೂ ಅನುಕೂಲಕರವಾಗಿವೆ.
– ಹುಕುಂಚಂದ್ ಸಾವಲಾಜಿ, ವಿಹಿಂಪ ಗೋರಕ್ಷಾ ವಿಭಾಗ ಕೇಂದ್ರೀಯ ಉಪಾಧ್ಯಕ್ಷ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...