More

    ಸರ್ಕಾರಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿತ

    ಪಿರಿಯಾಪಟ್ಟಣ: ತಾಲೂಕಿನಲ್ಲಿ ಸರ್ಕಾರಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಪಿ.ಜಿ.ಜನಸ್ಪಂದನ ಫೌಂಡೇಷನ್ ಅಧ್ಯಕ್ಷ ಪಿ.ಪ್ರಶಾಂತ್ ಗೌಡ ಆರೋಪಿಸಿದರು.


    ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿಗಳು, ಸರ್ವೇ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬರುತ್ತಿರುವ ಅನುದಾನವನ್ನು ಸಮರ್ಪಕವಾಗಿ ವಿತರಣೆ ಮಾಡುತ್ತಿಲ್ಲ. ತಾಲೂಕಿನ ಶೇ.90ಕ್ಕೂ ಹೆಚ್ಚಿನ ಇಲಾಖೆಗಳಲ್ಲಿ ಅಧಿಕಾರಿಗಳು ಭ್ರಷ್ಟರಾಗಿದ್ದಾರೆ. ಪ್ರತಿಯೊಂದು ಕಚೇರಿಯ ಗೋಡೆಗಳ ಮೇಲೆ ನಾವು ಲಂಚ ಪಡೆಯುವುದಿಲ್ಲ ಎಂಬ ಬೋರ್ಡ್ ಗಳನ್ನು ಕಡ್ಡಾಯವಾಗಿ ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ಬಂದಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.


    ಮಳೆಯ ಅಭಾವದಿಂದಾಗಿ ತಾಲೂಕಿನಲ್ಲಿ ಬಹುತೇಕ ಕೆರೆಗಳು ಒಣಗಿವೆ. 150ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿಗಳೇ ಚಾಲನೆ ನೀಡಿದ್ದರೂ ಅಪೂರ್ಣ ಕಾಮಗಾರಿಯಿಂದಾಗಿ ಇನ್ನೂ ಆರಂಭಗೊಂಡಿಲ್ಲ. ಕೆರೆಗಳಿಗೆ ನೀರು ತುಂಬಿಸುವುದಕ್ಕಿಂತ ಮೊದಲು ಕೆರೆಗಳಲ್ಲಿ ತುಂಬಿರುವ ಹೂಳನ್ನು ವೈಜ್ಞಾನಿಕವಾಗಿ ಹೊರತೆಗೆಯಬೇಕಿದೆ. ಅಧಿಕಾರಿಗಳ ನಿರ್ಲಕ್ಷೃದಿಂದ ಕೆರೆಗಳು ದುಸ್ಥಿತಿಗೆ ತಲುಪಿವೆ ಎಂದರು.


    ಗ್ರಾಮ ಪಂಚಾಯಿತಿಯಿಂದ ಕೆರೆಗಳಲ್ಲಿ ಸಿಕ್ಕ ಸಿಕ್ಕ ಕಡೆ ಹೂಳು ತೆಗೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದರಿಂದ ಜನ- ಜಾನುವಾರುಗಳಿಗೆ ಅಪಾಯ. ಅಲ್ಲದೆ ಕೆರೆಗಳ ಏರಿಗೆ ಹಾನಿಯಾಗಲಿದೆ. ತಾಲೂಕಿನ ಕುಂದನಹಳ್ಳಿ ಸರ್ಕಲ್ ಬಳಿ ವ್ಯಕ್ತಿಯೊಬ್ಬರು ತಮ್ಮ ವಾಟರ್ ಅಮ್ಯೂಸ್ಮೆಂಟ್ ಪಾರ್ಕ್ ಅಭಿವೃದ್ಧಿಗಾಗಿ ಸರ್ಕಾರಿ ಕೆರೆಯನ್ನೇ ಅವೈಜ್ಞಾನಿಕವಾಗಿ ಹೂಳು ತೆಗೆಯುತ್ತಿದ್ದರೂ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂದು ದೂರಿದರು.


    ತಾಲೂಕಿನ ನೀಲಂಗಾಲ, ಕಿರನಲ್ಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಅವೈಜ್ಞಾನಿಕವಾಗಿ ಹೂಳು ತೆಗೆಯಲಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ. ಈ ಬಗ್ಗೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್‌ಗೆ ದೂರು ನೀಡಲಾಗಿದೆ ಎಂದರು.
    ಕಿರಂಗೂರು ಮೋಹನ್, ಮಾಗಳಿ ಸ್ವಾಮಿ, ಎಸ್.ಬಿ.ಆದಿತ್ಯ, ಬಿ.ಆರ್.ಮನು, ಚಂದ್ರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts