More

    ಅವರಿಂದ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟಾಗಿದೆ: ಸಚಿವ ಶಿವರಾಮ್​ ಹೆಬ್ಬಾರ್ ಬೇಸರ

    ಉತ್ತರಕನ್ನಡ: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ವಿರುದ್ಧ ಮುನಿಸಿಕೊಂಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ ಕುರಿತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದ್ದಾರೆ.

    ಗೋಕರ್ಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಹೆಬ್ಬಾರ್​, ಸರ್ಕಾರವನ್ನು ಮುನ್ನಡೆಸುವ ಮುಖ್ಯಮಂತ್ರಿಯವರಿಗೆ ಪರಮೋಚ್ಚ ಅಧಿಕಾರವಿದೆ. ಅವರು ಯಾವುದೇ ಇಲಾಖೆಯಲ್ಲೂ ಕಾನೂನುಬದ್ಧವಾಗಿ ಅಧಿಕಾರ ಚಲಾಯಿಸಬಹುದು. ಈ ಹಿಂದಿನ ಎಲ್ಲ ಮುಖ್ಯಮಂತ್ರಿಗಳೂ‌ ಹೀಗೆಯೇ ಅಧಿಕಾರ ಚಲಾಯಿಸಿದ್ದಾರೆ ಎಂದು ಹೇಳಿದರು.

    ಇದನ್ನೂ ಓದಿ: ನೀವು ಸಿಎಂ ಆಗೋದಾದ್ರೆ ಜೆಡಿಎಸ್‌ ಶಾಸಕರೆಲ್ಲ ಜೈ ಅಂತೀವಿ: ಶಾಸಕ ಎಚ್‌.ಡಿ. ರೇವಣ್ಣ ಕೊಟ್ರು ಆಫರ್‌

    ಅಸಮಾಧಾನ ಇದ್ದಿದ್ದರೆ ಈಶ್ವರಪ್ಪನವರು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಬಹುದಿತ್ತು. ಮುಖ್ಯಮಂತ್ರಿ ಹಣಕಾಸು ಖಾತೆಯನ್ನು ಹೊಂದಿದ್ದಾರೆ. ಅವರು ಎಲ್ಲ ಶಾಸಕರ ಹಿತವನ್ನು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ ಹೆಬ್ಬಾರ್​, ಬಸವನಗೌಡ ಯತ್ನಾಳ್ ಅವರ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ‘ಕಾಲೂರಲು’ ಸಿಗದ ‘ಬೆಂ’ಬಲ; ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ?

    ಯತ್ನಾಳ್ ಇತ್ತೀಚೆಗೆ ನೀಡಿದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಬ್ಬಾರ್, ಯತ್ನಾಳ್ ಅವರಿಗೆ ಅನೇಕ ಬಾರಿ ರಾಷ್ಟ್ರೀಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಪದೇಪದೆ ಈ ರೀತಿ ಹೇಳಿಕೆ ನೀಡುತ್ತಿದ್ದಲ್ಲಿ ಕಾದು ನೋಡಿ ಎಂಬುದಾಗಿ ಹೇಳಿದರು.

    ನಿಮ್ಮೂರಿನ ಇನ್​ಸ್ಪೆಕ್ಟರ್​ ಬದಲಾಗಿದ್ದಾರಾ ನೋಡಿಕೊಳ್ಳಿ: 18 ಡಿವೈಎಸ್‌ಪಿ, 100 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ; ಇಲ್ಲಿದೆ ಪೂರ್ತಿ ಪಟ್ಟಿ

    ಈ ಮಹಾನಗರದಲ್ಲಿ ಎತ್ತರದ ಕಟ್ಟಡಗಳಲ್ಲಿ ವಾಸಿಸುವವರಿಗಿಂತ ಕೊಳೆಗೇರಿ ನಿವಾಸಿಗಳೇ ವಾಸಿ!: ಹೀಗಂದಿದ್ಯಾರು, ಯಾಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts