More

    ಎಚ್ಚೆತ್ತುಕೊಂಡ ಸರ್ಕಾರ ! ರಾಜ್ಯದಲ್ಲಿ ಮತ್ತೆ ಆಕ್ಸಿಜನ್ ಕೊರತೆಯಾಗದಂತೆ ಹಲವು ಕ್ರಮ

    ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರ ಸಭೆಯಲ್ಲಿ ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್​ಅನ್ನು ವಿಳಂಬವಿಲ್ಲದೆ ಪೂರೈಸುವ ಬಗ್ಗೆ ಚರ್ಚಿಸಲಾಯಿತು. ಆಕ್ಸಿಜನ್ ಸರಬರಾಜಿನಲ್ಲಿ ಪ್ರಾಯೋಗಿಕವಾಗಿ ಉಂಟಾಗುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಈ ಕೆಳಗಿನ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

    1. ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು.
    2. ಆಕ್ಸಿಜನ್ ಟ್ಯಾಂಕರ್​​ಗಳ ಫಿಲ್ಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು.
    3. ಆಕ್ಸಿಜನ್ ಟ್ಯಾಂಕರ್​​ಗಳ ತಡೆರಹಿತ ಪ್ರಯಾಣಕ್ಕಾಗಿ ಗ್ರೀನ್ ಕಾರಿಡಾರ್​​ಗಳನ್ನು ಒದಗಿಸುವುದು.
    4. ಟೋಲ್‍ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್‍ಗಳಿಗೆ ನಿರ್ದೇಶನ ನೀಡುವುದು.
    5. ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್​​ಗಳನ್ನು ಆಕ್ಸಿಜನ್ ಸಾಗಣೆಗಾಗಿ ಪರಿವರ್ತಿಸಲು ಕ್ರಮ ತೆಗೆದುಕೊಳ್ಳುವುದು.
    6. ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗೆ ಎಲ್‍ಪಿಜಿ ಟ್ಯಾಂಕರ್​​ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು, ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು.

    ಇದನ್ನೂ ಓದಿ: ’70 ಟನ್ ಆಕ್ಸಿಜನ್ ಬೇಡಿಕೆಗೆ 20 ಟನ್ ಪೂರೈಕೆ; ಸೋಂಕಿನಿಂದಾದ ಸಾವಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ’ ಎಂದ ಕಾಂಗ್ರೆಸ್

    ಇದಲ್ಲದೆ, ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಯನ್ನು ಸಂಪರ್ಕಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡಲು ಕೋರಲಾಯಿತು. ಈಗಾಗಲೇ ಲಭ್ಯವಿರುವ ಆಕ್ಸಿಜನ್ ಟ್ಯಾಂಕರ್​​ಗಳನ್ನು ಗರಿಷ್ಠ ಪ್ರಮಾಣದಲ್ಲಿ‌ ಬಳಸಿಕೊಳ್ಳಲು ಸೂಚಿಸಲಾಯಿತು.

    ದುರಂತದ ನಡುವೆ ಒಂದು ವಿಚಿತ್ರ ಘಟನೆ : ತಾಯಿಯ ಶವ ತರಲು ಒಳಹೋದವಗೆ ಕಾದಿತ್ತು ಆಶ್ಚರ್ಯ !

    ಮದುವೆ ಮಂಟಪ ದಾಳಿ : ಎರ್ರಾಬಿರ್ರಿ ವರ್ತಿಸಿದ ಡಿಎಂ ಸಸ್ಪೆಂಡ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts