More

    ಸರ್ಕಾರಿ ಕಾಲೇಜ್‌ಗೆ ಅಗತ್ಯ ಸೌಲಭ್ಯ

    ಗೋಕಾಕ: ಇಲ್ಲಿನ ಸರ್ಕಾರಿ ಪದವಿ ಕಾಲೇಜ್ ಅಭಿವೃದ್ಧಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಮಂಗಳವಾರ ನಗರದ ಪದವಿ ಕಾಲೇಜ್‌ಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿ ಮಾತನಾಡಿ, ಈ ಕಾಲೇಜ್‌ನಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರ ಇದೇ ಸ್ಥಳದಲ್ಲಿ ಅಥವಾ ಸರ್ಕಾರದ ಬೇರೆ ಸ್ಥಳಕ್ಕೆ ಪದವಿ ಕಾಲೇಜ್ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು. ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಡಾ.ಎಂ.ಜಿ ಹಿರೇಮಠ, ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಪೌರಾಯುಕ್ತ ಶಿವಾನಂದ ಹಿರೇಮಠ, ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಪ್ರಭಾರ ಪ್ರಾಚಾರ್ಯ ಮಹೇಶ ಕಂಬಾರ, ಪಕ್ಷದ ಕಾರ್ಯಕರ್ತರು ಇದ್ದರು.

    ನಿಯಮ ಮೀರಿದ್ದರೆ ಕಠಿಣ ಕಾನೂನು ಕ್ರಮ

    ಬೆಳಗಾವಿ ವಿಟಿಯುನಲ್ಲಿ ಕಳೆದ ಹತ್ತಾರು ವರ್ಷಗಳಿಂದ ಬೆಂಗಳೂರು ಮತ್ತು ಗದಗದಿಂದ ನಿಯೋಜನೆ ಮೇರೆಗೆ ಬಂದ ಕೆಲ ಸಿಬ್ಬಂದಿಗಳು ಇಲ್ಲೇ ಠಿಕಾಣಿ ಹೂಡಿದ್ದಾರೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅಶ್ವತ್ಥನಾರಾಯಣ, ಇಲಾಖೆಯಲ್ಲಿ ಹೊಸ ಹುದ್ದೆ ಭರ್ತಿಗೆ ವಿಳಂಬವಾದ ಕಾರಣ ಕಾನೂನಾತ್ಮಕವಾಗಿ ಕೆಲವರು ನಿಯೋಜನೆ ಮೇರೆಗೆ ಇಲ್ಲಿಗೆ ವರ್ಗವಾಗಿ ಬಂದಿದ್ದಾರೆ. ನಿಯಮ ಮೀರಿ ಉಳಿದಿದ್ದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts