blank

ಔಷಧೀಯ ಸಸ್ಯ ಬೆಳೆಸಲು ಸರ್ಕಾರ ಪಣ

blank

ಬೆಂಗಳೂರು: ಔಷಧೀಯ ಸಸ್ಯ ಬೆಳೆಯುವ ಬುಡಕಟ್ಟು ಜನಾಂಗವನ್ನು ಗುರುತಿಸಿ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ ಉತ್ತೇಜನ ನೀಡುವಂತೆ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಅರಣ್ಯ ಇಲಾಖೆ, ಆಯುಷ್ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆಗಳ ಅಧಿಕಾರಿಗಳ ಜತೆಗೆ ಔಷಧೀಯ ಸಸ್ಯಗಳ ಕುರಿತ ಸಭೆ ನಡೆಸಿದರು. ಆನಂತರ ಮಾತನಾಡಿದ ಡಾ.ಶಾಲಿನಿ ರಜನೀಶ್,ಔಷಧೀಯ ಸಸ್ಯಗಳಿಂದ ತಯಾರಾಗುವ ಔಷಧಗಳಿಗೆ ಸೂಕ್ತ ಕಚ್ಛಾ ವಸ್ತುಗಳ ಮತ್ತು ಪ್ರಮಾಣೀಕರಣದ ಕೊರತೆ ಇದೆ. ರಾಜ್ಯದಲ್ಲಿ ಬೆಳೆಯುವ ಪ್ರಮುಖ ಔಷಧಿ ಸಸ್ಯಗಳು ಮತ್ತು ಪ್ರದೇಶಗಳ ಪಟ್ಟಿ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನೆ.
ಕೆಲವು ಔಷಧಿ ಸಸ್ಯಗಳು ಹಿಮಾಲಯ ತಪ್ಪಲಿನಲ್ಲಿ ಮತ್ತು ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿದೆ. ಆ ಔಷಧಿ ಸದಸ್ಯಗಳನ್ನು ರಾಜ್ಯದಲ್ಲಿ ಬೆಳೆಯಲು ಅವಕಾಶದ ಬಗ್ಗೆ ಪರಿಶೀಲಿಸುವುದು ಮತ್ತು ಅದಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ಚರ್ಚೆ ನಡೆದಿದೆ.

ಉಪಯೋಗಕ್ಕೆ ಬಾರದೇ ಇರುವ ಸರ್ಕಾರಿ, ಖಾಸಗಿ ಭೂಮಿಯನ್ನು ಗುರುತಿಸಿ, ಔಷಧಿ ಸಸ್ಯಗಳನ್ನು ಬೆಳೆಸಲು ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ತೋಟಗಾರಿಕಾ ಇಲಾಖೆಯ ವತಿಯಿಂದ ಈಗಾಗಲೇ ಔಷಧೀಯ ಸಸ್ಯಗಳ ಫಾರಂಗಳ ಪಟ್ಟಿಯನ್ನು ಪಡೆಯಲಾಗುತ್ತಿದೆ. ನರೇಗಾ ಯೋಜನೆಯಡಿ 5 ಎಕರೆಗಿಂತ ಕಡಿಮೆ ಜಮೀನು ಕೃಷಿ ಮಾಡುವ ಸಣ್ಣ ರೈತರಿಗೆ ನೀಡುವ ಸೌಲಭ್ಯಗಳನ್ನು ಔಷಧೀಯ ಸಸ್ಯಗಳನ್ನು ಬೆಳೆಯುವ ರೈತರಿಗೂ ನೀಡಲು ನಿರ್ಧರ ಕೈಗೊಳ್ಳಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಲ್ಲಿ 34 ಸಾವಿರ ಬುಡಕಟ್ಟು ಮಹಿಳಾ ಗುಂಪುಗಳು ವನ್‌ಧನ್ ಕೇಂದ್ರಗಳ ಮೂಲಕ ಔಷಧಿ ಸಸ್ಯಗಳನ್ನು ಬೆಳೆಯುತ್ತಿದ್ದು, ಮಾರುಕಟ್ಟೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಎಪಿಎಂಸಿಗಳಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುವುದು. ಔಷಧೀಯ ಸಸ್ಯಗಳ ಸಂರಕ್ಷಣೆಗೆ ಹಾಲಿ ಇರುವ ಉಗ್ರಾಣಗಳಲ್ಲಿ ಸ್ಥಳಾವಕಾಶ, ನಬಾರ್ಡ್‌ನಡಿ ಕೆಸಿಸಿ (ಕಿಸಾನ್ ಕ್ರೆಡಿಟ್ ಕಾರ್ಡ್) ಜತೆಗೆ ಔಷಧೀಯ ಸಸ್ಯಗಳನ್ನು ಬೆಳೆಯುವ ರೈತರಿಗೆ ಪಾಸ್ ಬುಕ್ ವಿತರಿಸಲು ನಿರ್ಧರ ಮಾಡಲಾಗಿದೆ. ಕೃಷಿ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಎಕ್ಸಲೆನ್ಸ್, ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಸಹಯೋಗದೊಂದಿಗೆ ಔಷಧೀಯ ಸಸ್ಯಗಳ ರೈತರನ್ನು ಗುರುತಿಸಿ, ಜಿಲ್ಲಾವಾರು, ತಾಲ್ಲೂಕುವಾರು, ಕ್ಲಸ್ಟರ್‌ವಾರು ಜಿಐಎಸ್ ಮ್ಯಾಪಿಂಗ್ ಮಾಡಲು ಸರ್ಕಾರ ಕ್ರಮ ವಹಿಸಿದೆ ಎಂದು ಶಾಲಿನಿ ರಜನೀಶ್ ಮಾಹಿತಿ ನೀಡಿದರು.

ಶಾಲಾ ಹಂತದಲ್ಲಿಯೇ ಅರಿವು :
ರಾಜ್ಯದಲ್ಲಿ ಅತಿ ಹೆಚ್ಚು ಅಶ್ವಗಂಧವನ್ನು ಬೆಳೆದು, ಹೊರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತಿದೆ. ಆದರೂ ಮಧ್ಯಪ್ರದೇಶದಿಂದ ಖರೀದಿ ಮಾಡುವ ದುಸ್ಥಿತಿ ಉಂಟಾಗಿದೆ. ಇದಕ್ಕೆ ರಾಜ್ಯದಲ್ಲಿ ಸೂಕ್ತ ಮಾರುಕಟ್ಟೆ, ಉತ್ತೇಜನ ಇಲ್ಲದೆ ಇರುವುದು ಕಾರಣವಾಗಿದೆ.ಮನೆ-ಮದ್ದು ಕುರಿತು ಶಾಲಾ ಹಂತದಲ್ಲಿ ಮಕ್ಕಳಲ್ಲಿ ಅರಿವು ಮೂಡಿಸಲು ಯೋಜನೆ ರೂಪಿಸಲು ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಸೂಚಿಸಿದ್ದಾರೆ.

Share This Article

ಚಿಕ್ಕ ಮಕ್ಕಳು ಹಗಲಲ್ಲಿ ಅಧಿಕ ನಿದ್ರಿಸಲು ಇದೇ ಕಾರಣವಂತೆ! ವೈದ್ಯರು ಹೇಳೊದೇನು? | Children Sleep

Children Sleep: ಸಾಮಾನ್ಯವಾಗಿ ಹುಟ್ಟಿನಿಂದ 6 ತಿಂಗಳವರೆಗೆ, ಮಕ್ಕಳು ಯಾವಾಗ ಮಲಗುತ್ತಾರೆ ಮತ್ತು ಯಾವಾಗ ಎಚ್ಚರಗೊಳ್ಳುತ್ತಾರೆ…

ಇವುಗಳ ಜೊತೆ ಮುಲ್ತಾನಿ ಮೆಟ್ಟಿ ಫೇಸ್‌ ಪ್ಯಾಕ್‌ ಮಾಡಿ ಮುಖಕ್ಕೆ ಹಚ್ಚಿ, ರಿಸಲ್ಟ್‌ ನೀವೇ ನೋಡಿ! Skin Care

Skin Care : ತ್ವಚೆಯ ಆರೈಕೆಯಲ್ಲಿ ನಾವು ನೈಸರ್ಗಿಕವಾಗಿ ಬಳಸುವ ಮುಲ್ತಾನಿ ಮಿಟ್ಟಿ ಕೂಡ ಒಂದು.…