ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ; ಹಬ್ಬದ ಮುಂಗಡ ಹಣ 25 ಸಾವಿರ ರೂಪಾಯಿಗೆ ಹೆಚ್ಚಳ

Vidhana Soudha vvani
Published on

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡುತ್ತಿರುವ ಹಬ್ಬದ ಮುಂಗಡ ಮೊತ್ತವನ್ನು ಸರ್ಕಾರ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಹಬ್ಬದ ಮುಂಗಡ ಮೊತ್ತವನ್ನು 10 ಸಾವಿರ ರೂಪಾಯಿಗಳಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ.

ರಾಜ್ಯ ಸಿವಿಲ್ ಸೇವಾ ವೃಂದದಲ್ಲಿ ಕಾಯಂ ಆಗಿ ಸೇರ್ಪಡೆಯಾಗಿರುವ ಅಖಿಲ ಭಾರತ ಸೇವೆಯ ಅಧಿಕಾರಿಗಳು ಸೇರಿದಂತೆ ಒಬ್ಬ ಕಾಯಂ ಸರ್ಕಾರಿ ನೌಕರನಿಗೆ ಒಂದು ಆರ್ಥಿಕ ವರ್ಷದಲ್ಲಿ ಒಂದು ಬಾರಿಗೆ ಮಾತ್ರ ಪ್ರಸ್ತುತ ಮಂಜೂರು ಮಾಡಲಾಗುತ್ತಿರುವ ಬಡ್ಡಿ ರಹಿತ ಹಬ್ಬದ ಮುಂಗಡವನ್ನು 10 ಸಾವಿರ ರೂ.ಗಳಿಂದ 25 ಸಾವಿರ ರೂ.ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net