More

    ಸರ್ಕಾರಕ್ಕೆ ಮತ್ತೊಂದು ತಲೆನೋವು; ಇನ್ನೊಂದು ಸರ್ಕಾರಿ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನ

    ಬೆಂಗಳೂರು: ಇತ್ತೀಚೆಗಷ್ಟೇ ಸರ್ಕಾರಿ ನೌಕರರ ಸಂಘದ ಮುಷ್ಕರದ ಬಿಸಿ ಎದುರಿಸಿ, ವೇತನ ಏರಿಸಿ ನಿರಾಳಗೊಂಡಿರುವ ರಾಜ್ಯ ಸರ್ಕಾರಕ್ಕೆ ಇದೀಗ ಇನ್ನೊಂದು ತಲೆನೋವು ಎದುರಾಗಿದೆ. ಏಕೆಂದರೆ ಮತ್ತೊಂದು ಸರ್ಕಾರಿ ನೌಕರರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದೆ.

    ಇದನ್ನೂ ಓದಿ: ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧಾರ ಮಾಡಿದೆ. ಇದಕ್ಕೆ ಕೆಇಬಿ ಇಂಜಿನಿಯರುಗಳ ಸಂಘ, ಕೆಇಬಿ ಎಸ್​ಸಿ-ಎಸ್​ಟಿ ನೌಕರರ ಕಲ್ಯಾಣ ಸಂಸ್ಥೆ, ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘ, ಕವಿಪ್ರನಿನಿ ಡಿಪ್ಲೊಮಾ ಇಂಜಿನಿಯರುಗಳ ಸಂಘಗಗಳೂ ಕೈಜೋಡಿಸಿವೆ.

    ಇದನ್ನೂ ಓದಿ: ಸದ್ಯಕ್ಕಿಲ್ಲ 5 ಮತ್ತು 8ನೇ ತರಗತಿ ಪರೀಕ್ಷೆ; ಮುಂದೂಡುವುದಾಗಿ ಹೇಳಿದ ಸರ್ಕಾರ

    ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಆಡಳಿತ ಮಂಡಳಿಗೆ 14 ದಿನಗಳ ಮುಷ್ಕರ ನೋಟಿಸು ಜಾರಿಮಾಡಿದ್ದು, ಈಗಾಗಲೇ ಹತ್ತು ದಿನಗಳು ಉರುಳಿದ್ದರೂ ಇಲ್ಲಿಯವರೆಗೂ ಮಂಡಳಿಯಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆಯದಿರುವುದರಿಂದ ಅನಿವಾರ್ಯವಾಗಿ ನಿಗದಿಯಂತೆ ಮಾ.16ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್​.ಎಚ್.ಲಕ್ಷ್ಮೀಪತಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts