More

    ಮೂಲ ಸೌಕರ್ಯ ಒದಗಿಸುವಲ್ಲಿ ಸರ್ಕಾರ ವಿಫಲ

    ಹೊಳೆನರಸೀಪುರ: ದೇಶಕ್ಕೆ ಸ್ವಾತಂತ್ರೃ ಬಂದು 76 ವರ್ಷ ಕಳೆದಿದ್ದರೂ ಅಭಿವೃದ್ಧಿಯಲ್ಲಿ ಮಹತ್ವದ ಕಾರ್ಯ ನಿರ್ವಹಿಸುವ ಶಿಕ್ಷಣ ವ್ಯವಸ್ಥೆಯಲ್ಲಿ ಇನ್ನೂ ಸುಧಾರಣೆ ಕಂಡಿಲ್ಲ. ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳು, ಪ್ರಥಮ ದರ್ಜೆ ಕಾಲೇಜುಗಳು ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸುವಲ್ಲಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು.

    ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತ ಸೋಮವಾರ ಆಯೋಜಿಸಿದ್ದ ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

    ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಭೂಮಿಯನ್ನು ದಾನ ನೀಡಿ ಕಟ್ಟಿಸಿದ ಪ್ರಾಥಮಿಕ ಶಾಲೆಗಳು ಬೀಳುವ ಹಂತದಲ್ಲಿವೆ. ಜತೆಗೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದುವ ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡವ ಸಲುವಾಗಿ ಅಗತ್ಯ ಸೌಲಭ್ಯಗಳು, ಶಿಕ್ಷಕರು ಹಾಗೂ ಉಪನ್ಯಾಸಕರ ಕೊರತೆ ನೀಗಿಸುವ ವ್ಯವಸ್ಥೆಯನ್ನು ಮೊದಲಿಗೆ ಸರ್ಕಾರ ಮಾಡಬೇಕಿದೆ ಎಂದರು.

    ರಾಜ್ಯದಲ್ಲಿ ಶಿಕ್ಷಣ, ಕುಡಿಯುವ ನೀರು ಹಾಗೂ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

    ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಉಪ ನೋಂದಣಾಧಿಕಾರಿ ದಿವಾಕರ, ಉಪ ತಹಸೀಲ್ದಾರ್ ರೂಪೇಶ್, ಹಳ್ಳಿಮೈಸೂರು ಉಪತಹಸೀಲ್ದಾರ್ ಲೋಕೇಶ್, ಆರ್‌ಐ ಸತೀಶ್ ಹಾಗೂ ಉದಯ್, ಆಹಾರ ಇಲಾಖೆಯ ಅಧಿಕಾರಿ ಶೋಭಾ, ವಿಎ ಹರೀಶ್, ದೀಪಾ, ರಾಜೇಶ್ವರಿ, ಮೋನಿಕಾ, ಪ್ರಭಾವತಿ, ಹೇಮಾ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts