More

    ಕೆಎಸ್​ಆರ್​ಟಿಸಿ 4 ನಿಗಮಗಳ ನೌಕರರ ಮೂರು ತಿಂಗಳ ವೇತನ ಬಿಡುಗಡೆಗೆ ಸಿಎಂ ಸೂಚನೆ

    ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಮೂರು ತಿಂಗಳ ವೇತನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಾರಿಗೆ ನೌಕರರಿಗೆ ಮೂರು ತಿಂಗಳ ವೇತನ ಪಾವತಿಗೆ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರು. ಅದಕ್ಕೆ ಸ್ಪಂದಿಸಿದ ಸಿಎಂ ಬಿ.ಎಸ್​.ಯಡಿಯೂರಪ್ಪ, ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳ ವೇತನ ಪಾವತಿಗಾಗಿ 634.50 ಕೋಟಿ ರೂ. ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

    ರಾಜ್ಯ ಸರ್ಕಾರ ಮೂರು ತಿಂಗಳ ವೇತನಕ್ಕಾಗಿ 634.50 ಕೋಟಿ ರೂ. (ಶೇ.75) ಬಿಡುಗಡೆ ಮಾಡಿದರೆ, ಉಳಿದ ಶೇ.25 ಹಣವನ್ನು ಸಾರಿಗೆ ನಿಗಮಗಳು ತಮ್ಮ ಸಂಪನ್ಮೂಲ ಬಳಸಿಕೊಂಡು ಭರಿಸಲಿವೆ. ಮುಖ್ಯಮಂತ್ರಿಗಳ ಸ್ಪಂದನೆಯಿಂದ ಕೆಎಸ್ಸಾಟಿರ್ಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯವ್ಯ ಸಾರಿಗೆ ನಿಗಮಗಳ 1.30 ಲಕ್ಷ ನೌಕರರಿಗೆ ವೇತನ ಪಾವತಿ ಸಾಧ್ಯವಾಗಲಿದೆ. ತಮ್ಮ ಮನವಿಗೆ ಸಾಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಸಾರಿಗೆ ನಿಗಮಗಳ ಪರವಾಗಿ ಕೃತಜ್ಞತೆ ಅಪಿರ್ಸುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಹೇಳಿದ್ದಾರೆ.

    ಕರೊನಾದಿಂದ ಆದಾಯವಿಲ್ಲದೆ ಸಾರಿಗೆ ನಿಗಮಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ. ಹೀಗಾಗಿ ನವೆಂಬರ್​ ತಿಂಗಳ 17 ತಾರೀಖು ಕಳೆದರೂ ನೌಕರರಿಗೆ ಅಕ್ಟೋಬರ್​ ತಿಂಗಳ ವೇತನ ಪಾವತಿ ಮಾಡಿರಲಿಲ್ಲ. ದೀಪಾವಳಿ ಆಚರಿಸಲು ವೇತನವಿಲ್ಲದಂತಾಗಿ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದರು. ನೌಕರರ ಮಕ್ಕಳು “ಸಿಎಂ ಅಂಕಲ್​ ನಮ್ಮ ತಂದೆ ವೇತನ ಬಿಡುಗಡೆ ಮಾಡಿ’ ಎಂದು ವೀಡಿಯೋ ಮಾಡಿ ಆಗ್ರಹಿಸಿದ್ದರು. ಈ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts