More

    ಬೇಡಿಕೆಗಳಿಗೆ ಸ್ಪಂದಿಸದ ಸರ್ಕಾರ, ತರಗತಿ ಬಹಿಷ್ಕರಿಸಲು ಅತಿಥಿ ಶಿಕ್ಷಕರ ನಿರ್ಧಾರ

    ಬೆಂಗಳೂರು ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಯಾವುದೇ ಬೇಡಿಕೆಗಳನ್ನು ಸರ್ಕಾರವು ಈಡೇರಿಸದ ಹಿನ್ನೆಲೆಯಲ್ಲಿ ಸದ್ಯದಲ್ಲಿಯೇ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲು ನಿರ್ಧರಿಸಿದೆ.

    ಪ್ರಸ್ತುತ ದಿನಗಳಲ್ಲಿ ಅತಿಥಿ ಶಿಕ್ಷಕರು ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ. ಸರ್ಕಾರದ ನಿಲುವು ಸಾಮಾಜಿಕ ನ್ಯಾಯ ವಿರುದ್ದವಾಗಿದೆ. ಸರ್ಕಾರ ರಚನೆಯ ಪೂರ್ವದಲ್ಲಿ ನೀಡಿರುವ ಭರವಸೆಯಂತೆ ಅತಿಥಿ ಶಿಕ್ಷಕರ ಸೇವೆಯನ್ನು ಸೂಕ್ತ ಕಾನೂನು ರೂಪಿಸಿ ಕಾಯಂಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಎಚ್.ಎಸ್. ಹನುಮಂತ ಒತ್ತಾಯಿಸಿದ್ದಾರೆ.

    ಶಿಕ್ಷಣ ಇಲಾಖೆಯಲ್ಲಿ 11-12 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಬೇಡಿಕೆಗಳು ನ್ಯಾಯಸಮ್ಮತವಾಗಿವೆ. ಆದರೆ, ಸರ್ಕಾರವು ಮಲತಾಯಿ ಧೋರಣೆಯನ್ನು ಮಾಡುತ್ತಿದೆ. ಸರ್ಕಾರವು ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಪರಿಶೀಲನೆ ಮಾಡಿ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

    ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವು ಅತಿಥಿ ಶಿಕ್ಷಕರ ಬೇಡಿಕೆ ಕುರಿತ ತನ್ನ ನಿಲುವು ತಿಳಿಸಿದೆ. ಆ ಪ್ರಕಾರ, ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿ ಬದಲಾಗಿ ಮೊದಲು ಕೆಲಸ ಮಾಡಿದವರಿಗೆ ಆದ್ಯತೆ ನೀಡಬೇಕು, ಸೇವಾ ಭದ್ರತೆ ಕಲ್ಪಿಸಬೇಕು, 12 ತಿಂಗಳ ವೇತನ ನೀಡುವ ಜತೆಗೆ ನೇಮಕಾತಿಯಲ್ಲಿ ಶೇ.5 ಕೃಪಾಂಕ ನೀಡಬೇಕು.

    ದೆಹಲಿ, ಹರ್ಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಕೈಗೊಂಡ ನಿರ್ಣಯಗಳ ಅನ್ವಯ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಬೇಕು. ಸರ್ಕಾರಿ ನೌಕರರಂತೆ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕೆಂಬ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ.

    ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವೇತನವನ್ನು ಹೆಚ್ಚಿಸುವುದು ಮತ್ತು ಸುಪ್ರೀಂ ಕೋರ್ಟ್ ಆದೇಶದಂತೆ ಸಮಾ ಕೆಲಸಕ್ಕೆ ಸಮಾನ ವೇತನ ಆದೇಶವನ್ನು ಗೌರವಿಸಿ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಗೆ ಮಾತ್ರ ಪ್ರಸ್ತುತ ನೀಡುತ್ತಿರುವ ಗೌರವ ಸಂಭಾವನೆಯನ್ನು ಮಾತ್ರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಕ್ರಮವಾಗಿ 10,00 ಮತ್ತು 10,500ರಿಂದ 15,000 ಮತ್ತು 16,000 ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದೆ. ಹೀಗಾಗಿ, ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts