More

  ಕಬ್ಬನ್ ಪಾರ್ಕ್​​​​​ನಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ಯೋಜನೆ ಕೈ ಬಿಟ್ಟ ಸರ್ಕಾರ

  ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಹೊಸದಾಗಿ ಹತ್ತು ಅಂತಸ್ತುಗಳ ಕಟ್ಟಡವೊಂದನ್ನು ಕಟ್ಟಲು ಮುಂದಾಗಿದ್ದ ರಾಜ್ಯ ಸರ್ಕಾರ, ಸದ್ಯ ಆ ನಿರ್ಧಾರವನ್ನು ಕೈ ಬಿಟ್ಟಿದೆ. ಚುನಾವಣಾ ಆಯೋಗಕ್ಕೆ ಹೊಸ ಕಟ್ಟಡವೊಂದನ್ನು ನಿರ್ಮಿಸಲು ಹಾಗೂ ಕೆಲವು ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರಿಸುವ ಸಲುವಾಗಿ ಹತ್ತು ಅಂತಸ್ತುಗಳ ಬೃಹತ್ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಈ ಕಾಮಗಾರಿಗೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

  ಕಟ್ಟಡ ನಿರ್ಮಾಣಕ್ಕೆ ಮರಗಳನ್ನು ಕತ್ತರಿಸದೆ ಇರಲು ಆಗುವುದಿಲ್ಲ. ಅಷ್ಟೇ ಅಲ್ಲ ನಿರ್ಮಾಣದ ವೇಳೆ ಭಾರೀ ಗಾತ್ರದ ವಾಹನಗಳು ಹಾಗೂ ಯಂತ್ರಗಳು ಕಬ್ಬನ್ ಪಾರ್ಕ್‌ನಲ್ಲಿ ಕಾರ್ಯನಿರ್ವಹಿಸಿದರೆ ಪಾರ್ಕ್ ಮಾಲಿನ್ಯವಾಗುತ್ತದೆ ಎಂದು ಪರಿಸರ ಪ್ರೇಮಿಗಳು ಅನೇಕ ಸಂಘ- ಸಂಸ್ಧೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು.

  ಇದೀಗ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹತ್ತು ಅಂತಸ್ತುಗಳ ಕಟ್ಟಡ ನಿರ್ಮಿಸುವ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಹೊಸ ಜಾಗವನ್ನು ಹುಡುಕಲಾಗುತ್ತದೆ ಎನ್ನಲಾಗಿದೆ. ಸದ್ಯ ಹತ್ತು ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಬಿಡಲಾಗಿದ್ದು, ಕರ್ನಾಟಕ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬೇರೆ ಜಾಗ ಹುಡುಕಾಟದಲ್ಲಿದ್ದಾರೆ. 

  ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಬಳಕೆದಾರರಿಗೆ ಒಳ್ಳೆಯ ಸುದ್ದಿ; ಬೆಂಬಲಕ್ಕೆ ಬಂದ ಆಕ್ಸಿಸ್ ಬ್ಯಾಂಕ್

   

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts