ಜಮ್ಮುವಿನಲ್ಲಿ ಪಾಕಿಸ್ತಾನ ಶೆಲ್ ದಾಳಿಗೆ ಸರ್ಕಾರಿ ಅಧಿಕಾರಿ ಬಲಿ..Operation Sindoor

Government official killed two staff members critically injured in Pakistani shelling in J&K
Published on

ಜಮ್ಮು:  (Operation Sindoor) ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಅವರ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಉತ್ತುಂಗಕ್ಕೇರಿದೆ. ಪಾಕಿಸ್ತಾನಕ್ಕೆ ಬಲವಾದ ಸಂದೇಶ ರವಾನಿಸಲು ಭಾರತ ಬಲವಾದ ದಾಳಿ ನಡೆಸಿತು. ಈ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನದ ಗಡಿ ಪ್ರದೇಶಗಳಲ್ಲಿ ಡ್ರೋನ್ ದಾಳಿ ಮತ್ತು ಗುಂಡಿನ ದಾಳಿ ನಡೆಯಿತು. ಪಾಕಿಸ್ತಾನದ ಹಲವಾರು ವಿಮಾನ ನಿಲ್ದಾಣಗಳಲ್ಲಿ ಶನಿವಾರ ಬೆಳಿಗ್ಗೆ ಪ್ರಬಲ ಸ್ಫೋಟಗಳು ಸಂಭವಿಸಿವೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನಿ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಧಿಕಾರಿಯ ಇಬ್ಬರು ಸಿಬ್ಬಂದಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net