More

  ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಲಿ- ರಮೇಶ ಜಾರಕಿಹೊಳಿ

  ಬೆಳಗಾವಿ: ಕರೊನಾ ಸೋಂಕು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಮನೆಯಿಂದ ಹೊರಬರದೇ ಸರ್ಕಾರದ ಆದೇಶವನ್ನು ತಪ್ಪದೇ ಪಾಲಿಸಬೇಕು ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

  ಪ್ರಧಾನಿ ನರೇಂದ್ರ ಮೋದಿಯವರು 21 ದಿನಗಳ ಕಾಲ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿ, ಭಾರತ ದೇಶದ ಪ್ರಜೆಗಳೆಲ್ಲರೂ ತಮ್ಮ ತಮ್ಮ ಮನೆಗಳ ಒಳಗೇ ಇದ್ದು ಆರೋಗ್ಯ ಕಾಪಾಡಿಕೊಳ್ಳಲು ಕರೆ ನೀಡಿದ್ದಾರೆ. ಅದರಂತೆ ಮಾ.25ರಂದ ಗೋಕಾಕ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಲಾಕ್‌ಡೌನ್ ಘೋಷಣೆಯಾಗಿದೆ.

  ಜನರಿಗೆ ಅವಶ್ಯಕವಾಗಿರುವ ಜೀವನಾವಶ್ಯಕ ಸಾಮಗ್ರಿಗಳು ನಿಮ್ಮ ಮನೆಗಳ ಬಳಿಯೇ ದೊರೆಯುವ ವ್ಯವಸ್ಥೆ ಮಾಡಿದ್ದೇವೆ. ಸಾರ್ವಜನಿಕರು ವದಂತಿಗಳಿಗೆ ಕಿವಿಕೊಡದೇ ಮನೆಗಳಲ್ಲಿ ಸುರಕ್ಷಿತವಾಗಿರಬೇಕು. ಸರ್ಕಾರದ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಅನವಶ್ಯಕವಾಗಿ ರಸ್ತೆಗಳಲ್ಲಿ ಓಡಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

  See also  ಸಂಸದನಾಗಿದ್ದ ಆ ನಟ ಸಂಸತ್ತಲ್ಲಿ ಐದು ವರ್ಷ ಮಾತನಾಡಿರಲೇ ಇಲ್ಲ: ಪ್ರಲ್ಹಾದ್ ಜೋಶಿ ಹೀಗಂದಿದ್ದು ಯಾರಿಗೆ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts