ಬೆಂಗಳೂರು ಕಾಲ್ತುಳಿತ ಪ್ರಕರಣ CID ತನಿಖೆಗೆ ಸರ್ಕಾರ ಆದೇಶ! | Bengaluru Stampede

dk - 2025-06-05T200552.248
Published on

Bengaluru Stampede : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟ ಹಿನ್ನೆಲೆ ಇದೀಗ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು(RCB) ಫ್ರಾಂಚೈಸಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಕೆಲ ಗಂಟೆಗಳಲ್ಲಿಯೇ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ, 56 ಜನರು ಗಾಯಗೊಂಡ ಘಟನೆಯ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸಿಐಡಿ ತನಿಖೆಗೆ ನೀಡುವುದಾಗಿ ತಿಳಿಸಿದೆ. ಅಲ್ಲದೆ, ಘಟನೆಯ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಲು ಸಿಐಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗುವುದು ಎಂದು ತಿಳಿಸಿದೆ.

ಆರ್‌ಸಿಬಿ ಫ್ರಾಂಚೈಸಿ ಸೇರಿ ಡಿಎನ್‌ಎ (ಈವೆಂಟ್ ಮ್ಯಾನೇಜರ್), ಕೆಎಸ್‌ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್​ ಮಂಡಳಿ) ಆಡಳಿತ ಸಮಿತಿ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಲ್ತುಳಿತ ಘಟನೆಯಲ್ಲಿ ಕ್ರಿಮಿನಲ್ ನಿರ್ಲಕ್ಷ್ಯವನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net