More

    ಐದು ಸಾವಿರ ಅತಿಥಿ ಶಿಕ್ಷಕರ ನೇಮಕ ಆದೇಶ ಹೊರಡಿಸಿದ ಸರ್ಕಾರ

    ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಿಗೇ ರಾಜ್ಯ ಸರ್ಕಾರ ಅತಿಥಿ ಶಿಕ್ಷಕವೃಂದಕ್ಕೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದೆ.

    ಒಂದೆಡೆ ಅತಿಥಿ ಶಿಕ್ಷಕರಿಗೆ ಗೌರವಧನವನ್ನು 7,500 ರೂಪಾಯಿಯಿಂದ 10 ಸಾವಿರ ರೂಪಾಯಿಗೆ ಏರಿಕೆ ಮಾಡಿ ಆದೇಶ ಹೊರಡಿಸಿರುವ ಸರ್ಕಾರ ಮತ್ತೊಂದೆಡೆ 5,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಂಬಂಧವಾಗಿಯೂ ಆದೇಶ ಮಾಡಿದೆ.

    ಇದನ್ನೂ ಓದಿ: ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆ- ಸರ್ಕಾರದ ಆದೇಶ ಯಾರ‍್ಯಾರಿಗೆ ಎಷ್ಟೆಷ್ಟು?

    ಎರಡನೇ ಹಂತದಲ್ಲಿ ನಾಲ್ಕು ಸಾವಿರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಹಾಗೂ ಒಂದು ಸಾವಿರ ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಧನ 10,000 ರೂ. ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಗೌರವ ಧನ 10,500 ರೂ. ಆಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    29 ವರ್ಷಗಳ ಬಳಿಕ ಪಿಯು ಪರೀಕ್ಷೆ ಬರೆದ ಶಾಸಕರ ಪತ್ನಿ ಫಸ್ಟ್​ ಕ್ಲಾಸ್​ನಲ್ಲಿ ಪಾಸ್

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts