More

    ಗ್ರಾಪಂ ಚುನಾವಣೆ ಜವಾಬ್ದಾರಿ ವಹಿಸಿಕೊಳ್ಳಿ

    ಶಿವಮೊಗ್ಗ: ರಾಜ್ಯದ ವಿವಿಧ ನಿಗಮಗಳಿಗೆ ನಾಮನಿರ್ದೇಶಿತಗೊಂಡವರು ಗ್ರಾಪಂ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸೂಚಿಸಿದರು.

    ಬಿಜೆಪಿ ಕಚೇರಿಯಲ್ಲಿ ಬುಧವಾರ ವಿವಿಧ ನಿಗಮ ಮಂಡಳಿಗಳಿಗೆ ನಾಮನಿರ್ದೇಶನಗೊಂಡ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ನಿರ್ದೇಶಕರನ್ನು ಸನ್ಮಾನಿಸಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದರು.

    ಬಿಜೆಪಿಯಲ್ಲಿ ಮಾತ್ರ ಕಾರ್ಯಕರ್ತರನ್ನು ಗೌರವಿಸುವ, ಅವರಿಗೆ ಜವಾಬ್ದಾರಿ ನೀಡುವ ಹೊಣೆಗಾರಿಕೆ ಇದೆ. ನಿಗಮ ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಲು ಸಾಧ್ಯವಾಗದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಣ್ಣೀರು ಹಾಕಿದ್ದರು. ಆದರೆ ನಮ್ಮಲ್ಲಿ ಆ ಪರಿಸ್ಥಿತಿ ಇಲ್ಲ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪಥನಗೊಂಡ 1.2 ವರ್ಷದಲ್ಲೇ ಬಿಜೆಪಿ ಸರ್ಕಾರ ಎಲ್ಲ ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿದೆ ಎಂದರು.

    ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅತಿ ಹೆಚ್ಚು ಪ್ರಮಾಣದಲ್ಲಿ ಜಿಲ್ಲೆಯ ಕಾರ್ಯಕರ್ತರಿಗೆ ನಿಗಮ, ಮಂಡಳಿಗಳಿಗೆ ನೇಮಕ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿಯೇ 72 ಬೇರೆ ಬೇರೆ ನಿಗಮ, ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರಿಗೆ ಸಿಂಹಪಾಲು ಅವಕಾಶ ಸಿಕ್ಕಿದೆ ಎಂದರು.

    ತಮಗೆ ನೀಡಿದ ಅವಕಾಶಗಳನ್ನು ಬಳಿಸಿಕೊಂಡು ಜಿಲ್ಲೆಯ ಪ್ರಗತಿ ಜತೆಗೆ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು. ಅಟಲ್ ಬಿಹಾರಿ ವಾಜಪೇಯಿ ಅಂತಹ ಹಿರಿಯರು ಕಟ್ಟಿದ ಪಕ್ಷವನ್ನು ಮತ್ತಷ್ಟು ಬೆಳೆಯುವಂತೆ ಮಾಡಬೇಕು. ಕಾರ್ಯಕರ್ತರೇ ನಮ್ಮೆಲ್ಲರ ಶಕ್ತಿ ಎಂಬುದನ್ನು ಮರೆಯಬಾರದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts