More

    ಸರ್ಕಾರಿ ಯೋಜನೆಗಾಗಿ ಮಧ್ಯವರ್ತಿಗಳ ನಂಬದಿರಿ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳೆ ಸಲಹೆ

    ರಾಯಚೂರು: ಮಹಿಳೆಯರು ಸರ್ಕಾರದ ಸೌಕರ್ಯ ಪಡೆಯಲು ನಿಗಮದ ಜತೆ ನಿರಂತರವಾಗಿ ಸಂಪರ್ಕದಲ್ಲಿರುವ ಜತೆಗೆ ಯಾವುದೇ ಮಧ್ಯವರ್ತಿಗಳನ್ನು ನಂಬದೆ ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ಆರ್ಥಿಕವಾಗಿ ಸಬಲರಾಗುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳೆ ಹೇಳಿದರು.

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ದೇವದಾಸಿ ಪುನರ್ವಸತಿ ಯೋಜನೆ ಇಲಾಖೆ ಆಶ್ರಯದಲ್ಲಿ ನಗರದ ಜೆ.ಸಿ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳೆಯರ ಜತೆಗೆ ಸಂವಾದ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಅಭಿವೃದ್ಧಿಗೆ ನಿಗಮ ಸ್ಥಾಪಿಸಿ, ಮೊದಲ ಬಾರಿಗೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇದನ್ನು ಈ ಭಾಗದ ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಲು ಅನುಕೂಲವಾಗಲಿದೆ. ಸೌಕರ್ಯ ಪಡೆಯಲು ಹಿಂಜರಿಕೆ ಬೇಡ ಎಂದು ಸಲಹೆ ನೀಡಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ ಮಾತನಾಡಿ, ಮಹಿಳೆಯರ ಅಭಿವೃದ್ಧಿಯಿಂದ ಕುಟುಂಬ, ಸಮುದಾಯ, ಸಮಾಜ ಅಭಿವೃದ್ಧಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು. ದೇವದಾಸಿ ಪುನರ್ವಸತಿ ಯೋಜನೆ ಇಲಾಖೆ ಅಧಿಕಾರಿ ಗೋಪಾಲ ನಾಯಕ, ಬಿಜೆಪಿ ಮಹಿಳಾ ಘಟಕದ ಶರಣಮ್ಮ ಕಾಮರೆಡ್ಡಿ , ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳಾದ ಎಚ್.ಪದ್ಮಾ, ಜ್ಯೋತಿ, ಈರಮ್ಮ, ಶ್ರೀದೇವಿ, ಶರಣಮ್ಮ, ಸೀತಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts