ಸರ್ಕಾರದ ಧೋರಣೆಗಳಿಂದ ಬಡವರಿಗೆ ಅನ್ಯಾಯ

kota (7)
Published on

ಕೋಟ: ರಾಜಕಾರಣದಲ್ಲಿ ವೈರತ್ವ ಇರುವುದು ಸಹಜ. ಆದರೆ ಜನಸಾಮಾನ್ಯರಿಗೆ ತೊಂದರೆ ಆದಾಗ ಸರ್ಕಾರದ ಗಮನಕ್ಕೆ ತರುವುದು ವಿಪಕ್ಷದವರ ಕೆಲಸ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೋಟತಟ್ಟು ಗ್ರಾಮ ಪಂಚಾಯಿತಿ ಎದುರು ಕೋಟತಟ್ಟು ಶಕ್ತಿ ಕೇಂದ್ರದ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು.

9/11 ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕೊಡುವುದು ಸರಿಯಲ್ಲ. ಇದರಿಂದ ಅತೀ ದೂರದ ಗ್ರಾಮೀಣ ಭಾಗದ ಜನರು ಜಿಲ್ಲಾ ಕೇಂದ್ರಕ್ಕೆ ಬರುವುದು ಕಷ್ಟ ಸಾಧ್ಯ. ಗ್ರಾಪಂಗಳಲ್ಲೇ 9/11 ವಿತರಿಸುವ ವ್ಯವಸ್ಥೆ ಆಗಬೇಕು. ರಾಜ್ಯ ಸರ್ಕಾರದ ಹೊಸ ಆದೇಶಗಳಿಂದ ತೊಂದರೆ ಅನುಭವಿಸುವಂತಾಗಿದೆ. ಸರ್ಕಾರದ ಇಂತಹ ಧೋರಣೆಯಿಂದ ಬಡವರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಸರ್ಕಾರದ ಧೋರಣೆಗಳು ಬದಲಾಗಿ ಬಡವರಿಗೆ ನ್ಯಾಯ ಸಿಗುವಂತಾಗಬೇಕು ಎಂದರು.

ಕೋಟತಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಮೋದ್ ಹಂದೆ, ಪ್ರಧಾನ ಕಾರ್ಯದರ್ಶಿ ವಾಸು ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಸತೀಶ ಕುಂದರ್ ಬಾರಿಕೆರೆ, ಉಪಾಧ್ಯಕ್ಷೆ ಸರಸ್ವತಿ, ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಮಂಡಲದ ಉಪಾಧ್ಯಕ್ಷೆ ಅಶ್ವಿನಿ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿದ್ಯಾ ಸಾಲಿಯಾನ್, ಎಸ್‌ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೆ.ಸೀತಾ, ಕುಂದಾಪುರ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net