ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಸುಂಕ ತೆರವು; ಮೊಬೈಲ್ ಮತ್ತು​ ಚಾರ್ಜರ್​ಗಳ ಮೇಲಿನ ತೆರಿಗೆ ಇಳಿಕೆ

mobile
Published on

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸಿದ್ದಾರೆ. ಕೃಷಿ, ಉದ್ಯೋಗ, ಶಿಕ್ಷಣ, ರಸ್ತೆ  ಅಭಿವೃದ್ಧಿ ಹೀಗೆ ಮುಂತಾದ ಕ್ಷೇತ್ರಗಳ ಕುರಿತಾಗಿ ಬಜೆಟ್​ನಲ್ಲಿ ಮನ್ನಣೆ ನೀಡಲಾಗಿದೆ. ಹೀಗೆ ಆರೋಗ್ಯ ಕ್ಷೇತ್ರಕ್ಕೂ ಕೂಡಾ ಮನ್ನಣೆ ನೀಡಲಾಗಿದೆ. 

ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿವೆ. ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವರು ಬಜೆಟ್​​ನಲ್ಲಿ ಘೋಷಿಸಿದ್ದಾರೆ.

ಮೊಬೈಲ್ ,​ ಚಾರ್ಜರ್​ಗಳ ಮೇಲಿನ ತೆರಿಗೆ ಇಳಿಕೆ : ಮೊಬೈಲ್ ಹಾಗೂ​ ಚಾರ್ಜರ್​ಗಳ ಮೇಲಿನ ತೆರಿಗೆ ಇಳಿಕೆ ಬಗ್ಗೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.

ಮೊಬೈಲ್ ಫೋನ್, ಮೊಬೈಲ್ ಚಾರ್ಜರ್‌ಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಸರ್ಕಾರವು 15% ಕ್ಕೆ ಇಳಿಸಿದೆ.  ಜಿಎಸ್‌ಟಿ ತೆರಿಗೆ ರಚನೆಯನ್ನು ಇನ್ನಷ್ಟು ಸರಳಗೊಳಿಸಲು ಮತ್ತು ತರ್ಕಬದ್ಧಗೊಳಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹಣಕಾಸು ಸಚಿವರು ಹೇಳಿದರು. 25 ನಿರ್ಣಾಯಕ ಖನಿಜಗಳ ಮೇಲೆ ಸರ್ಕಾರವು ಕಸ್ಟಮ್ಸ್ ಸುಂಕವನ್ನು ವಿನಾಯಿತಿ ನೀಡುತ್ತದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net