More

    2 ಶಾಲೆ ದತ್ತು ಪಡೆದ ಸ್ನೇಹಿತರ ಬಳಗ

    ಗದಗ: ಗದಗ ಬೆಟಗೇರಿ ಅವಳಿ ನಗರಕ್ಕೆ ಮಹಾತ್ಮಗಾಂಧಿ ಭೇಟಿ ನೀಡಿ ಒಂದು ನೂರು ವರ್ಷ ಪೂರೈಸಿದ ನಿಮಿತ್ತ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಹಾಗೂ ಸ್ನೇಹಿತರ ಬಳಗ ವತಿಯಿಂದ ತಾಲೂಕಿನ ಅಂತೂರ ಬೆಂತೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 8ನ್ನು ದತ್ತು ಪಡೆಯಲಾಯಿತು.

    ನಗರದ ಹಾಳಕೇರಿ ಮಠದ ಎದುರಿನ ರಸ್ತೆಯಲ್ಲಿರುವ ಅನಿಲ ಮೆಣಸಿನಕಾಯಿ ಅವರ ನಿವಾಸದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಅಮೂಲ್ಯ ಕಾರ್ಯಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಶಿವಕುಮಾರ ಉದಾಸಿ, ಶಾಸಕ ಕಳಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ ಸೇರಿ ನೂರಾರು ಜನ ಸಾಕ್ಷಿಯಾದರು.

    ಸಚಿವ ಕೆ.ಎಸ್. ಈಶ್ವರಪ್ಪ, ‘ಎರಡು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುವ ಕನಸು ಕಂಡಿರುವ ಅನಿಲ ಹಾಗೂ ಬಳಗಕ್ಕೆ ಒಳ್ಳೆಯದಾಗಲಿ’ ಎಂದರು.

    ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಸರ್ಕಾರಿ ಶಾಲೆಗಳ ದತ್ತು ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲವಿದ್ದು, ಅಗತ್ಯ ಸಹಕಾರ ನೀಡಲಾಗುವುದು. ಇಂತಹ ಕಾರ್ಯಗಳನ್ನು ಮಾಡುವ ಮೂಲಕ ಅನಿಲ ಹಾಗೂ ಅವರ ಸ್ನೇಹಿತರ ಬಳಗ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಲ್ಲದೆ ಇತರರಿಗೆ ಪ್ರೇರಣೆಯಾಗಿದೆ ಎಂದರು.

    ಅನಿಲ ಮೆಣಸಿನಕಾಯಿ ಮಾತನಾಡಿ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪ್ರತಿಸ್ಪರ್ಧಿ ಆಗಬೇಕು. ಯಾವ ದೇಶದಲ್ಲಿ ದೇವಾಲಯಗಳಿಗಿಂತ ಶಾಲೆಗಳ ಗಂಟೆ ಹೆಚ್ಚಿಗೆ ಕೇಳಿಸುತ್ತದೆಯೋ ಆ ದೇಶ ಶ್ರೀಮಂತವಾಗಿರುತ್ತದೆ ಎಂದು ಹೇಳಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಾತುಗಳನ್ನು ಅರಿತು ಎರಡು ಶಾಲೆಗಳನ್ನು ದತ್ತು ಪಡೆಯಲಾಗಿದೆ. ಈ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

    ಮುಖಂಡರಾದ ಅನಿಲ ಅಬ್ಬಿಗೇರಿ, ಕಾಂತಿಲಾಲ ಬನ್ಸಾಲಿ, ಅಶ್ವಿನಿ ಜಗತಾಪ, ವಿಜಯಲಕ್ಷ್ಮಿ ಮಾನ್ವಿ ಸೇರಿ ಬಿಜೆಪಿಯ ಎಲ್ಲ ಹಿರಿಯರು, ಪದಾಧಿಕಾರಿಗಳು, ಅಭಿಮಾನಿಗಳು, ಕಾರ್ಯಕರ್ತರು ಇದ್ದರು. ರಾಘವೇಂದ್ರ ಯಳವತ್ತಿ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts