More

    ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ

    ಮಳವಳ್ಳಿ: ತಾಲೂಕು ವ್ಯಾಪ್ತಿಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳ ಉನ್ನತೀಕರಣಕ್ಕೆ ಖಾಸಗಿ ವ್ಯಕ್ತಿಗಳ ಸಹಭಾಗಿತ್ವದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

    ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಕಂಪ್ಯೂಟರ್ ಕೊಠಡಿ, ಮುಖ್ಯಶಿಕ್ಷಕರ ಕೊಠಡಿ ಹಾಗೂ ಕೂಸಿನ ಮನೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

    ತಾಲೂಕಿನ ಪ್ರತಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕಲಿಕಾ ಕೊಠಡಿ, ಕಾಂಪೌಂಡ್, ಶೌಚಗೃಹ ಮತ್ತು ಡಿಜಿಟಲ್ ಶಿಕ್ಷಣಕ್ಕಾಗಿ ಕಂಪ್ಯೂಟರ್ ಸೇರಿದಂತೆ ಅಗತ್ಯವಿರುವ ಕಲ್ಪಿಸಲು ಕ್ರಮವಹಿಸಲಾಗುವುದು ಎಂದರು.
    ಮುಂದಿನ ದಿನಗಳಲ್ಲಿ ತಾಲೂಕಿನ ಪ್ರತಿ ಸರ್ಕಾರಿ ಶಾಲೆಯನ್ನು ಉನ್ನತೀಕರಿಸಿ ಮೂಲ ಸೌಕರ್ಯ ನೀಡಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಅಭಿವೃದ್ಧಿಪಡಿಸಲಾಗುವುದೆಂದರು.

    ಗ್ರಾಪಂ ಅಧ್ಯಕ್ಷ ರವಿ, ಉಪಾಧ್ಯಕ್ಷೆ ನಾಗಮ್ಮ, ಸದಸ್ಯ ಪ್ರಭು ಹಂಗ್ರಾಪುರ, ಗುಂಡಶೆಟ್ಟಿ, ಸೊಸೈಟಿ ಅಧ್ಯಕ್ಷೆ ನಂದಿನಿಕುಮಾರ್, ಬಿಇಒ ಚಂದ್ರಪಾಟೀಲ್, ತಾ.ಪಂ ಮಾಜಿ ಅಧ್ಯಕ್ಷ ಆರ್.ಎನ್.ವಿಶ್ವಾಸ್, ಮುಖ್ಯಶಿಕ್ಷಕಿ ಪವಿತ್ರಮ್ಮ, ಮುಖಂಡ ನಾಡಗೌಡ್ರ ಪುಟ್ಟರಾಜು, ಶಾಲಿನಿ, ಭವ್ಯಾ, ಪ್ರಭುಸ್ವಾಮಿ, ಶಿಕ್ಷಣ ಇಲಾಖೆ ಬಿಆರ್‌ಸಿ ಶ್ರೀನಿವಾಸ್, ಬಿಆರ್‌ಪಿ ಬಾಬು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts