More

    ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ

    ಸಿಂಧನೂರು: ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ, ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ತಹಸಿಲ್ ಕಚೇರಿ ಶಿರಸ್ತೇದಾರ್ ಚಂದ್ರಶೇಖರಗೆ ಜಯ ಕರ್ನಾಟಕ ಸಂಘಟನೆಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

    ತಾಲೂಕು ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಗಳ ಕಟ್ಟಡಗಳು ಬಿರುಕು ಬಿಟ್ಟು ಶಿಥಿಲಾವಸ್ಥೆಯಲ್ಲಿವೆ. ಬಾಗಿಲು, ಕಿಟಕಿ ಮುರಿದು ಹೋಗಿವೆ. ನೆಲಹಾಸು ಕಿತ್ತು ಹೋಗಿವೆ. ಕುಡಿವ ನೀರು, ಶೌಚಗೃಹ ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

    ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಲ್ಲಿರುವಂತೆ ನೋಡಿಕೊಳ್ಳಬೇಕು. ಸರ್ಕಾರಿ ಶಾಲೆಗಳನ್ನು ಕಡೆಗಣಿಸಿ, ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಪ್ರೋತ್ಸಾಹಿಸುವುದು ಸರಿಯಲ್ಲ. ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಕಟ್ಟಡ ನಿರ್ಮಿಸಿ 60 ವರ್ಷಗಳಾಗಿದ್ದು, ಕಸ್ತೂರಿ ಬಾ ಬಾಲಕಿಯರ ವಸತಿ ಶಾಲೆ ಇದೇ ಕಟ್ಟಡದಲ್ಲಿದೆ. ಈ ಬಗ್ಗೆ ಗಮನಹರಿಸಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಒದಗಿಸಲು ಮುಂದಾಗಬೇಕೆಂದು ಒತ್ತಾಯಿಸಲಾಯಿತು.ಪದಾಧಿಕಾರಿಗಳಾದ ರಾಜು ಮಡಿವಾಳ, ಹನುಮಂತಪ್ಪ ಬೂದಿಹಾಳ, ರಾಘು, ಶಶಿಕುಮಾರ, ಬಸವರಾಜ ಅಮರಾಪುರ, ಹನುಮಂತ ಅಲಬನೂರು, ನಾಗಪ್ಪ, ಮೋಹಿನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts