More

    Karnataka Budget: 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ

    ಬೆಂಗಳೂರು: ಬಜೆಟ್​​​ನಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ.ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್​ ಹಾಗೂ ಇಂಟರ್​ನೆಟ್​ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.  

    ಕನ್ನಡ ಇಂಗ್ಲಿಷ್ ಮಾಧ್ಯಮ ಆರಂಭ
    ಸರ್ಕಾರಿ ಶಾಲೆಗಳ ಸಬಲೀಕರಣ, ದಾಖಲಾತಿ ಹೆಚ್ಚಳ ಉದ್ದೇಶದಿಂದ ರಾಜ್ಯದೆಲ್ಲೆಡೆ ಉತ್ತಮ ಸೌಲಭ್ಯ ಹೊಂದಿರುವ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಮತ್ತು ಒಂದನೇ ತರಗತಿಯಲ್ಲಿ ಕನ್ನಡ, ಇಂಗ್ಲಿಷ್ ದ್ವಿಮಾಧ್ಯಮ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ 283 ಕರ್ನಾಟಕ ಪಬ್ಲಿಕ್ ಸ್ಕೂಲ್ ಸೇರಿ 2686 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ತರಗತಿ ನಡೆಸುತ್ತಿದ್ದು, ಇದರೊಂದಿಗೆ ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.

    ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಫೆಬ್ರವರಿ 28ರ ವರೆಗೆ ಉತ್ತಮ ಸೌಲಭ್ಯ ಹೊಂದಿದ ಶಾಲೆಗಳು ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ. ಹಾಲಿ ಇರುವ ಕನ್ನಡ ಇತರೆ ಮಾಧ್ಯಮಗಳ ಜೊತೆಗೆ ಹೊಸದಾಗಿ ಒಂದನೇ ತರಗತಿಯಿಂದ ಅಂಗ್ಲ ಮಾಧ್ಯಮ ವಿಭಾಗ ದ್ವಿಭಾಷಾ ಮಾಧ್ಯಮ ತೆರೆಯುವ ಕುರಿತು ಪ್ರಸ್ತಾವನೆ ಸಲ್ಲಿಸಬಹುದಾಗಿದೆ. 

    ಕರ್ನಾಟಕ ಬಜೆಟ್ 2024: ದಶಕಗಳ ಕನಸು ನನಸು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts