More

    ಉಚಿತ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಪಾತ್ರ ದೊಡ್ಡದು

    ಚನ್ನರಾಯಪಟ್ಟಣ: ಉಚಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.

    ಪಟ್ಟಣದ ಪೇಟೆ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 2023-24ನೇ ಸಾಲಿನ ಶಾಲಾ ಸಂವತ್ಸರೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕುಟುಂಬದ ಆರ್ಥಿಕ ಸ್ಥಿರತೆಗೆ ತಕ್ಕಂತೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಪಡೆಯಬಹುದಾಗಿದೆ. ಸರ್ಕಾರಿ ಶಾಲೆ ಶಿಕ್ಷಕರು ಸೂಕ್ತ ತರಬೇತಿ ಪಡೆದು ಗುಣಮಟ್ಟ ಶಿಕ್ಷಣ ಒದಗಿಸುತ್ತಾರೆ ಎಂದರು.

    ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಸಿಗಬೇಕೆಂಬ ದೃಷ್ಟಿಯಿಂದ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಆಧುನಿಕ ಸೌಲಭ್ಯ ಒದಗಿಸ ಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಶಾಲೆಗಳ ಸುತ್ತ ಕಾಂಪೌಂಡ್ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ಕಳೆದ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ, ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ನಿವೃತ್ತ ಅಪಾರ ಜಿಲ್ಲಾಧಿಕಾರಿ ಎಚ್.ಎಂ.ನಾಗಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್.ಅನಿಲ್, ಮುಖ್ಯ ಶಿಕ್ಷಕಿ ನೇತ್ರಾವತಿ, ಪ್ರಧಾನ ಭಾಷಣಕಾರ ಉ.ರಾ.ನಾಗೇಶ್, ಪ್ರಾಂಶುಪಾಲ ಕೆ.ಟಿ.ರಾಮೇಗೌಡ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಟಿ. ಮಂಜಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts