More

    ಸರ್ಕಾರಿ ಶಾಲೆಗಳಿಗೆ ಶಿಕ್ಷಕರು ಹಾಜರ್, ವಿದ್ಯಾರ್ಥಿಗಳು ಚಕ್ಕರ್

    ಶಿವಮೊಗ್ಗ: ಬೇಸಿಗೆ ರಜೆ ಮುಕ್ತಾಯಗೊಂಡು ಸೋಮವಾರ ಜಿಲ್ಲಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭಗೊಂಡವು. ಮೊದಲ ದಿನ ಶಿಕ್ಷಕರು ಮತ್ತು ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ಹಾಜರಾದರೆ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಶಾಲೆಯತ್ತ ಮುಖ ಮಾಡಿದ್ದರು. ಸರ್ಕಾರದ ನಿರ್ದೇಶನದಂತೆ ಸೋಮವಾರದಿಂದಲೇ ಶಾಲೆಗಳು ಶುರುವಾಗಿದ್ದು ಮೇ 31ರಂದು ಶಾಲಾ ಪ್ರಾರಂಭೋತ್ಸವಕ್ಕೆ ಶಿಕ್ಷಕರು ಸಿದ್ಧತೆ ಮಾಡಿಕೊಂಡರು.

    2,307 ಪ್ರಾಥಮಿಕ ಮತ್ತು 511 ಪ್ರೌಢಶಾಲೆ ಸೇರಿ ಒಟ್ಟಾರೆ ಜಿಲ್ಲೆಯಲ್ಲಿ ಒಟ್ಟಾರೆ 2,818 ಸರ್ಕಾರಿ ಶಾಲೆಗಳಿದ್ದು ಅದರಲ್ಲಿ ಒಂದನೇ ತರಗತಿಗೆ 23,914 ಮತ್ತು 8ನೇ ತರಗತಿಗೆ 26,965 ಮಕ್ಕಳು ದಾಖಲಾತಿ ಪಡೆದಿದ್ದಾರೆ. ಒಟ್ಟಾರೆ 2.62 ಲಕ್ಷ ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದು ಸೋಮವಾರ ಶೇ.20 ವಿದ್ಯಾರ್ಥಿಗಳು ಮಾತ್ರ ಶಾಲೆಗಳಿಗೆ ತೆರಳಿದ್ದರು.
    ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ಮತ್ತು ಸಮವಸ್ತ್ರಗಳು ಪೂರೈಕೆ ಆಗಿವೆ. ಆ ನಿಟ್ಟಿನಲ್ಲಿ ಬಹುತೇಕ ಕಡೆ ಶಿಕ್ಷಕರು ಶಾಲೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಕೊಟ್ಟು ಕಳುಹಿಸಿದರು. 31ಕ್ಕೆ ಶಾಲಾ ಪ್ರಾರಂಭೋತ್ಸವಕ್ಕೆ ಸಜ್ಜಾಗುವಂತೆ ಶಿಕ್ಷಣ ಇಲಾಖೆ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರಿಗೆ ಸೂಚನೆ ನೀಡಿದೆ. ಸಣ್ಣಪುಟ್ಟ ಸಮಸ್ಯೆಗಳಿಗೆ ಸರಿಪಡಿಸಿಕೊಂಡು ತರಗತಿಗಳನ್ನು ಆರಂಭಿಸುವಂತೆ ಸೂಚಿಸಿದೆ. ಹಾಗಾಗಿ ಈಗಾಗಲೇ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸುಣ್ಣಬಣ್ಣ ಬಳಿದು, ಕಸ ಗುಡಿಸಿ ಸ್ವಚ್ಛಗೊಳಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts