More

    ಪ್ರೈವೇಟ್​ ಸ್ಕೂಲ್​ ಟೀಚರ್ಸ್​ಗೆ ಸರ್ಕಾರಿ ಶಾಲೆ ಶಿಕ್ಷಕರಿಂದ ನೆರವು?

    ಬೆಂಗಳೂರು: ಕರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳ ಶಿಕ್ಷಕರಿಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಒಂದು ಅಥವಾ ಎರಡು ದಿನದ ವೇತನ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಮನವಿ ಮಾಡಿದ್ದಾರೆ.

    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಅವರು ಒಂದು ತಿಂಗಳ ವೇತನ ನೀಡುವುದಾಗಿ ಹೇಳಿದ್ದಾರೆ. ನಾನು ಕೂಡ ನನ್ನ ಪಾಲನ್ನು ನೀಡುತ್ತೇನೆ. ಅದರಂತೆ, ಶಿಕ್ಷಕರು ಉದಾರತೆ ಮೆರೆಯುವ ಮೂಲಕ ಸಮಾಜಕ್ಕೆ ಸಕಾರಾತ್ಮಕ ಸಂದೇಶ ರವಾನಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ಕೋರಿದರು. ಇದನ್ನೂ ಓದಿರಿ ಸಿಇಟಿಗೂ ಕರೊನಾ ಛಾಯೆ, ಈ ತಿಂಗಳು ಎಕ್ಸಾಂ ನಡೆಯೋದು ಡೌಟು

    ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂದು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಇಲಾಖೆಯ ಲಭ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಆಥಿರ್ಕವಾಗಿ ಸಹಕಾರ ನೀಡಲು ಸಾಧ್ಯವಿದೆಯೇ ಎಂದು ಅವಲೋಕಿಸಲಾಗುತ್ತಿದೆ ಎಂದು ಸಚಿವ ಸುರೇಶ್​ ಕುಮಾರ್​ ವಿವರಿಸಿದರು.

    ಕಠಿಣ ಪರಿಸ್ಥಿತಿಯಲ್ಲೂ ಸರ್ಕಾರಿ ಮತ್ತು ಅನುದಾನಿತ ಶಿಕ್ಷಕರ ವೇತನ ಬಿಡುಗಡೆಗೆ ವಿಳಂಬ ಮಾಡಿಲ್ಲ. ಆದ್ದರಿಂದ ಶಿಕ್ಷಕರು ಮಾನವೀಯತೆ ಮೆರೆಯುವ ಮೂಲಕ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಬರುವಂತೆ ತಿಳಿಸಿದರು.

    ಬಸ್​ ನಿಲ್ದಾಣದಲ್ಲೇ ಕರೊನಾ ಶಂಕಿತನ ಶವ ಬಿಟ್ಟು ಹೋದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts