25.7 C
Bangalore
Sunday, December 15, 2019

ಅಡಕೆ-ಕಾಳುಮೆಣಸು ಕೊಳೆರೋಗಕ್ಕೆ ಜಂಟಿ ಸರ್ವೇ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಅತಿವೃಷ್ಟಿಯಿಂದಾಗಿ ಅಡಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಕೊಳೆರೋಗ ವ್ಯಾಪಿಸಿ ರೈತರಿಗೆ ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ರೈತರ ಬೇಡಿಕೆ ಹಿನ್ನೆಲೆಯಲ್ಲಿ ರೋಗದ ವ್ಯಾಪಕತೆ ಪತ್ತೆ ಹಚ್ಚಿ ರೈತರಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ.

ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಡಕೆ-ಕಾಳುಮೆಣಸು ಬೆಳೆಗಳಿಗೆ ಕೊಳೆರೋಗದಿಂದ ಆಗಿರುವ ಹಾನಿಯ ವ್ಯಾಪ್ತಿಯನ್ನು ನಿಖರವಾಗಿ ಅಂದಾಜಿಸಲು ಕಂದಾಯ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆ ಜಂಟಿಯಾಗಿ ರೈತವಾರು, ಗ್ರಾಮವಾರು ಸಮೀಕ್ಷೆ ನಡೆಸಿ, ನಿಗದಿತ ಸಮಯದಲ್ಲಿ ವರದಿ ನೀಡಲು ತೋಟಗಾರಿಕಾ ಇಲಾಖೆ ನಿರ್ದೇಶಕರಿಗೆ ಸೂಚಿಸಲಾಗಿದೆ. ನಿರ್ದೇಶಕರ ಸೂಚನೆಯಂತೆ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಹಾನಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ.

ವ್ಯಾಪಕ ಹಾನಿ: ಜಿಲ್ಲೆಯಲ್ಲಿ ಕೊಳೆರೋಗದಿಂದ ವ್ಯಾಪಕ ಹಾನಿ ಸಂಭವಿಸಿದ್ದು, 39,336 ಹೆಕ್ಟೇರ್ ಅಡಕೆ ಹಾಗೂ 3,558 ಹೆಕ್ಟೇರ್‌ನಷ್ಟು ಕಾಳುಮೆಣಸು ಹಾನಿಯಾಗಿದೆ. ಶೇ.90ರಷ್ಟು ಅಡಕೆ ಮರಗಳು ಬಲಿಯಾಗಿವೆ ಎಂದು ರೈತ ಸಂಘ ಆರೋಪಿಸಿದೆ. ಅನೇಕ ರೈತರ ತೋಟಗಳು ಶೇ.100 ಹಾನಿಗೀಡಾಗಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಮದ್ದು ಸಿಂಪಡಣೆಯಾಗದೆ ಕೊಳೆರೋಗ ಬಂದಿರುವುದು ಒಂದು ಬಗೆಯಾದರೆ ಮದ್ದು ಸಿಂಪಡಿಸಿದರೂ, ಮಳೆಗೆ ಕೊಚ್ಚಿಹೋಗಿ ಮರಗಳಿಗೆ ರೋಗ ಆವರಿಸಿರುವ ನಿದರ್ಶನವೂ ಇದೆ.

ಸಮೀಕ್ಷಾ ತಂಡ: ಕೊಳೆರೋಗದಿಂದ ಹಾನಿಗೊಳಗಾದ ತೋಟಗಳ ಸಮೀಕ್ಷೆಗಾಗಿ ಸಹಾಯಕ ತೋಟಗಾರಿಕಾ ಅಧಿಕಾರಿ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿ/ಗ್ರಾಮ ಸಹಾಯಕರು, ಸಹಾಯಕ ಕೃಷಿ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ. ಕೆಲವೆಡೆ ಸಮೀಕ್ಷೆ ಆರಂಭವಾಗಿದ್ದು, ನಗರ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದು, ಚುನಾವಣೆ ಮುಗಿದ ಬಳಿಕ ಸಮೀಕ್ಷೆ ವ್ಯಾಪಕವಾಗಿ ಆರಂಭವಾಗಲಿದೆ. ರೈತರೂ ತಮ್ಮ ತೋಟದ ಹಾನಿ ಬಗ್ಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಅನುಸರಿಸಿ ಸಮೀಕ್ಷಾ ತಂಡ ರೈತರ ಮನೆಗೆ ಭೇಟಿ ನೀಡಲಿದೆ.

ಸಮೀಕ್ಷೆಯ ಪ್ರಧಾನ ಅಂಶಗಳು: ಸಮೀಕ್ಷಾ ತಂಡ ಕೃಷಿಕರ ತೋಟಗಳಿಗೆ ಭೇಟಿ ನೀಡಿ, ತೋಟದ ವಿಸ್ತೀರ್ಣ, ಅಡಕೆ-ಕಾಳುಮೆಣಸು ಬೆಳೆದಿರುವ ವಿಸ್ತೀರ್ಣ, ತೋಟದ ರಚನೆ ಹಾಗೂ ನಿರ್ವಹಣೆ, ಅಡಕೆ ಮರಗಳ ಅಂದಾಜು ವಯಸ್ಸು, ಅಕ್ಕಪಕ್ಕದ ಮರಗಳ ಇಳುವರಿ ಮೊದಲಾದ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ಹಾನಿಯ ನಿಖರವಾಗಿ ದಾಖಲಿಸಬೇಕು. ಶೇ.33ಕ್ಕಿಂತ ಹೆಚ್ಚು ಮರಗಳು ಕೊಳೆ ರೋಗದಿಂದ ಹಾನಿಯಾಗಿದ್ದರೆ, ಅಂತಹ ತೋಟಗಳ ಕಡ್ಡಾಯ ಪರಿಶೀಲನೆ ಮಾಡಬೇಕು ಎಂದು ಸೂಚಿಸಲಾಗಿದೆ.

ಸಮೀಕ್ಷಾ ತಂಡಗಳನ್ನು ಸಿದ್ಧಪಡಿಸಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಸಮೀಕ್ಷೆ ಆರಂಭ. ಅರ್ಜಿ ಕೊಟ್ಟವರ ತೋಟಗಳಿಗೆ ಹೋಗಿ ಸಮೀಕ್ಷೆ ನಡೆಸುವುದು ಹಾಗೂ ಯಾವ ಪ್ರದೇಶದಲ್ಲಿ ಹೆಚ್ಚಾಗಿ ಹಾನಿಯಾಗಿದೆಯೋ, ಅಲ್ಲಿ ಸ್ವಯಂಪ್ರೇರಿತವಾಗಿ ಅಧಿಕಾರಿಗಳು ಹೋಗಿ ಪರಿಶೀಲಿಸಿ ವರದಿ ತಯಾರಿಸಲಿದ್ದಾರೆ. ಸಮೀಕ್ಷೆಗೆ ಅವಧಿ ನಿಗದಿಪಡಿಸಿಲ್ಲ. ಶೇ.33ಕ್ಕಿಂತ ಹೆಚ್ಚು ಹಾನಿಗೊಳಗಾದ ತೋಟಗಳಿಗೆ ಅಧಿಕಾರಿಗಳು ಆದ್ಯತೆ ಮೇಲೆ ಭೇಟಿ ನೀಡಲಿದ್ದಾರೆ.
|ಎಚ್.ಆರ್.ನಾಯ್ಕ ತೋಟಗಾರಿಕೆ ಇಲಾಖೆ ಉಪನಿರ್ದೇಶಕ

ಸಾವಿರಾರು ರೈತರು ಜೀವನದ ದಾರಿ ಕಳೆದುಕೊಳ್ಳವ ಪರಿಸ್ಥಿತಿ ಬಂದಿದೆ. ರೈತರ ಸಮಸ್ಯೆಗೆ ಜಿಲ್ಲಾಧಿಕಾರಿ ಸ್ಪಂದಿಸಿದ್ದರೂ, ಸಮೀಕ್ಷೆ ನಡೆಸಿ ಸರ್ಕಾರದಿಂದ ನೀಡಲಿರುವ ಪರಿಹಾರ (ಎಕರೆಗೆ 3 ಸಾವಿರ ರೂ)ಯಾವುದಕ್ಕೂ ಸಾಕಾಗದು. ಒಂದರಿಂದ ಎರಡು ಲಕ್ಷ ರೂ. ಸಿಕ್ಕರೆ ರೈತರ ನಷ್ಟ ಸರಿದೂಗಿಸಲು ಸಾಧ್ಯ.
|ಎನ್.ಮನೋಹರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ, ರಾಜ್ಯ ರೈತ ಸಂಘ ಹಸಿರು ಸೇನೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...