More

    ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ ಗೊಂದಲ ನಿವಾರಣೆಗೆ ಶೀಘ್ರದಲ್ಲೇ ಹೊಸ ಮಾರ್ಗಸೂಚಿ

    ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ ವಿಚಾರದಲ್ಲಿನ ಗೊಂದಲ ನಿವಾರಣೆಗೆ ಮಾರ್ಗಸೂಚಿಯನ್ನು ಬದಲಿಸಲಾಗುವುದು ಹಾಗೂ ಗುರುವಾರ ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
    ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿಯ ಸುನೀಲ್‌ಕುಮಾರ್ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ ಕಾರ್ಯವು ಅವೈಜ್ಞಾನಿಕವಾಗಿ ನಡೆದಿದೆ. ಮಲೆನಾಡು ಭಾಗದಲ್ಲಿ ನಿಯಮದ ಪ್ರಕಾರ ಮರು ವಿಂಗಡಣೆಯಾದರೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಅದರಲ್ಲೂ ಕೆಲ ತಾಲೂಕುಗಳಲ್ಲಿ ಕಡಿಮೆ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯಲ್ಲಿ ಅಸಮಾನತೆ ಸೃಷ್ಟಿಯಾಗುತ್ತಿದೆ. ಹೀಗಾಗಿ ಈಗಿರುವ ಮಾರ್ಗಸೂಚಿಯನ್ನು ಬದಲಿಸುವಂತೆ ಆಗ್ರಹಿಸಿದರು. ಅದಕ್ಕೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಪಕ್ಷಾತೀತವಾಗಿ ಧ್ವನಿಗೂಡಿಸಿ, ಗೊಂದಲ ನಿವಾರಿಸುವಂತೆ ಮನವಿ ಮಾಡಿದರು.

    ಅದಕ್ಕುತ್ತರಿಸಿದ ಬಸವರಾಜ ಬೊಮ್ಮಾಯಿ, ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಪುನರ್ ವಿಂಗಡಣೆ ಕಾರ್ಯ ನಡೆಸುತ್ತಿದೆ. ಅದಕ್ಕೆ ಜಿಲ್ಲಾಧಿಕಾರಿಗಳ ನೆರವು ಪಡೆಯಲಾಗಿದೆ. ಆದರೆ, ಸರ್ಕಾರ ಜಿಲ್ಲಾಧಿಕಾರಿಗಳಿಗೆ ನೀಡಲಾಗಿರುವ ಮಾರ್ಗಸೂಚಿಯಲ್ಲಿ ಗೊಂದಲಗಳಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕ್ಷೇತ್ರ ಪುನರ್‌ವಿಂಗಡಣೆ ಕುರಿತಂತೆ ವಿರೋಧ ಮತ್ತು ಆಡಳಿತ ಪಕ್ಷದ ಶಾಸಕರೊಂದಿಗೆ ಗುರುವಾರ ಸಭೆ ನಡೆಸಲಾಗುವುದು. ಜತೆಗೆ ಮಾರ್ಗಸೂಚಿಯಲ್ಲಿನ ಅಂಶಗಳನ್ನು ಬದಲಿಸಿ, ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಹೇಳಿದರು.

    ಇದನ್ನೂ ಓದಿ: ಬಟ್ಟೆ ಹಾಕೋದು-ಬಿಚ್ಚುವುದರ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ: ಚೆನ್ನಾಗಿ ಕಾಣಿಸಬೇಕಂತ ಸಿದ್ದರಾಮಯ್ಯ ಕಲರ್ ಬಟ್ಟೆ ತಗೋಳೋಕೆ ಶುರುಮಾಡಿದ್ದಾರಂತೆ!

    ಇವುಗಳ ಜತೆಗೆ ರಾಜ್ಯ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ಜತೆಗೂ ಚರ್ಚಿಸಲಾಗುತ್ತದೆ. ಮಾರ್ಗಸೂಚಿಯಲ್ಲಿನ ಗೊಂದಲ, ಕ್ಷೇತ್ರ ಪುನರ್‌ವಿಂಗಡಣೆ ನಂತರ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಆಯೋಗಕ್ಕೆ ತಿಳಿಸಲಾಗುವುದು. ಜತೆಗೆ ಹೊಸ ಮಾರ್ಗಸೂಚಿ ಪ್ರಕಟಿಸುವವರೆಗೆ, ಯಾವುದೇ ಕ್ರಮ ಕೈಗೊಳ್ಳದಂತೆ ಮನವಿ ಮಾಡಲಾಗುವುದು ಎಂದ ಅವರು, ರಾಜ್ಯ ಸರ್ಕಾರಕ್ಕೆ ಚುನಾವಣೆ ಮುಂದೂಡುವ ಯಾವುದೇ ಚಿಂತನೆ ಇಲ್ಲ. ಆಯೋಗ ಯಾವಾಗ ಚುನಾವಣೆ ನಡೆಸಬೇಕೆಂದರೂ ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು.

    ಇನ್ನು 15 ದಿನಗಳೊಳಗೆ ಬಗರ್ ಹುಕುಂ ಸಮಿತಿ ರಚನೆ; ಕಂದಾಯ ಸಚಿವ ಆರ್. ಅಶೋಕ್​ ಭರವಸೆ

    ಕಣ್ಣಿದ್ದೂ ಕುರುಡನಾದ ಗೋಲ್ಡನ್ ಸ್ಟಾರ್; ‘ಸಿಂಪಲ್’ ಸುನಿ ನಿರ್ದೇಶನದ ‘ಸಖತ್’ ಸವಾಲಿನ ಪಾತ್ರದಲ್ಲಿ ಗಣೇಶ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts