More

    ಡ್ರಗ್ಸ್ ದಂಧೆ ಮಟ್ಟ ಹಾಕಲು ಸರ್ಕಾರ ಕೆಲಸ ಮಾಡುತ್ತಿದೆ

    ಮೈಸೂರು: ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

    ಮುಖ್ಯಮಂತ್ರಿ, ಗೃಹ ಸಚಿವರು ಡ್ರಗ್ಸ್ ದಂಧೆ ಮಟ್ಟಹಾಕಲು ಶ್ರಮಿಸುತ್ತಿದ್ದಾರೆ. ಈ ವಿಚಾರದಲ್ಲಿ ಹಿಂದೆ ಯಾವ ಸರ್ಕಾರವು ಮಾಡದ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ, ಯಾವುದೇ ಪ್ರಭಾವಕ್ಕೂ ಸರ್ಕಾರ ಮಣಿಯುವುದಿಲ್ಲ. ಯಾರೇ ಇದ್ದರೂ ಅವರಿಗೆ ಕ್ಷಮೆ ಇಲ್ಲ ಎಂದು ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

    ರಾಗಿಣಿ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಚಿತ್ರರಂಗದ ಬಗ್ಗೆ ಸಾಕಷ್ಟು ಗೌರವ ಇದೆ. ಚಿತ್ರನಟರು ಸಾಮಾನ್ಯವಾಗಿ ಎಲ್ಲ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯ. ಕೆಲ ನಟ, ನಟಿಯರು ಒಂದೇ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾರೆ. ಹೀಗಾಗಿ, ಅದೇ ಪಕ್ಷದವರು ಎಂದು ಹೇಳಲು ಸಾಧ್ಯವಿಲ್ಲ. ಇಲ್ಲಿ ಯಾರೇ ತಪ್ಪು ಮಾಡಿದರೂ ಅವರ ರಕ್ಷಣೆಯ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಲಾಗಿದೆ. ಆದರೆ, ಇಂತಹ ಆರೋಪಗಳು ಹೊಸದೇನಲ್ಲ. ಹಿಂದೆಯೂ ಮಾಡಿದ್ದರು, ಮುಂದೆಯೂ ಮಾಡುತ್ತಾರೆ. ನಮ್ಮ ಕುಟುಂಬದ ಮೇಲೆ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಯಾವುದೇ ಕಾರಣಕ್ಕೂ ನಾನು ಈ ವಿಚಾರಕ್ಕೆ ತಲೆಕೆಡಿಸುಕೊಳ್ಳುವುದಿಲ್ಲ. ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದರೆ ಆದಷ್ಟು ಬೇಗ ಬಿಡುಗಡೆ ಮಾಡಲಿ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts