More

    ಬಗರ್‌ಹುಕುಂ ಸಮಸ್ಯೆ ಬಗೆಹರಿಸಲು ಸರ್ಕಾರದಿಂದ ಪ್ರಯತ್ನ: ಮಧು ಬಂಗಾರಪ್ಪ

    ತೀರ್ಥಹಳ್ಳಿ: ದಶಕಗಳಿಂದ ನನೆಗುದಿಗೆ ಬಿದ್ದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಬಗರ್‌ಹುಕುಂ ಸಮಸ್ಯೆ ಬಗೆಹರಿಸುವ ಪ್ರಯತ್ನ ರಾಜ್ಯ ಸರ್ಕಾರದಿಂದ ನಡೆದಿದ್ದು ಶೀಘ್ರದಲ್ಲಿ ಈ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
    ಪಟ್ಟಣದಲ್ಲಿ ಸೋಮವಾರ ಪಂಚಾಯತ್‌ರಾಜ್ ಇಲಾಖೆಯಿಂದ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಗ್ರಾಮೀಣಾಭಿವೃದ್ಧಿ ಭವನ ಉದ್ಘಾಟನೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
    ಮಲೆನಾಡಿನ ರೈತರ ಸಮಸ್ಯೆ ಪರಿಹರಿಸಲು ಇರುವ ಕಾನೂನು ತೊಡಕುಗಳನ್ನು ನಿವಾರಿಸಿಕೊಳ್ಳುವ ಅಗತ್ಯವಿದೆ. ಈ ಪ್ರಯತ್ನ ಒಂದು ಹಂತಕ್ಕೆ ತಲುಪಿದ್ದು ಶೀಘ್ರ ಹಕ್ಕುಪತ್ರ ಕೊಡುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
    ನಮ್ಮ ಶಾಲೆ-ನಮ್ಮ ಜವಾಬ್ದಾರಿ ಯೋಜನೆ ಮೂಲಕ ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ನಡೆದಿದ್ದು ಈ ಸಲುವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘಸAಸ್ಥೆಗಳು ಮುಂದೆ ಬರಬೇಕಿದೆ. ಹಿರಿಯ ಸಾಹಿತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಊರಿನಲ್ಲಿ ಹಿರಿಯ ವಿದ್ಯಾರ್ಥಿಗಳೇ ಸೇರಿ 6 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಶಾಲೆಯನ್ನು ನಿರ್ಮಿಸಿಕೊಟ್ಟಿದ್ದಾರೆ ಎಂದರು.
    ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಕರಾವಳಿ ಮಲೆನಾಡು ಸಂಪರ್ಕ ವ್ಯವಸ್ಥೆಗೆ ಆದ್ಯತೆ ನೀಡಲು ರಿಪ್ಪನ್‌ಪೇಟೆಯಿಂದ ಮಾಸ್ತಿಕಟ್ಟೆ ಮಾರ್ಗವಾಗಿ ಗಂಗೊಳ್ಳಿವರೆಗೆ ಬಂದರು ಸಂಪರ್ಕ ಮಾರ್ಗ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರಕ್ಕೆ 163 ಕೋಟಿ ರೂ. ವೆಚ್ಚದ ಹೊಸ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಬುಧವಾರ ಸರ್ಕಾರದ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದರು.
    ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಸರ್ಕಾರದ ಎಲ್ಲ ಇಲಾಖೆಗಳೂ ಒಂದೇ ಸೂರಿನಡಿ ಬರುವಂತೆ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಹೆಗ್ಗೋಡು ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ 344 ಕೋಟಿ ರೂ. ಮೊತ್ತದ ಬಹು ಗ್ರಾಮ ಕುಡಿಯುವ ನೀರಿಗೆ ವಿರೋಧ ಮಾಡಬಾರದು. ವರಾಹಿ ಹಿನ್ನೀರ ಪ್ರದೇಶವಾದ ದೊಡ್ಡಿನಮನೆಯಿಂದ ನೀರನ್ನು ಎತ್ತಲಾಗುವುದು. ಈ ಜಾಗದಲ್ಲಿ ನೀರನ್ನು ಎತ್ತುವುದಿಲ್ಲ. ಟ್ರೀಟ್‌ಮೆಂಟ್ ಪ್ಲಾಂಟ್ ಹೊರತು ಪಡಿಸಿ ಬೇರೆ ಕಾಮಗಾರಿ ಮಾಡುವ ಉದ್ದೇಶವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
    ಮಾಜಿ ಶಾಸಕ ಕಡಿದಾಳು ದಿವಾಕರ್ ಅವರನ್ನು ಸನ್ಮಾನಿಸಲಾಯಿತು. ಎಂಎಡಿಬಿ ಆಧ್ಯಕ್ಷ ಆರ್.ಎಂ.ಮAಜುನಾಥ ಗೌಡ, ಪಪಂ ಅಧ್ಯಕ್ಷೆ ಗೀತಾ ರಮೇಶ್, ತಾಪಂ ಇಒ ಎಂ.ಶೈಲಾ, ಆಡಳಿತಾಽಕಾರಿ ಆರ್.ಗಣೇಶ್ ಇದ್ದರು.

    ಆಗುಂಬೆ ಘಾಟ್‌ನಲ್ಲಿ ಸುರಂಗ ಮಾರ್ಗ
    ರಾಷ್ಟಿçÃಯ ಹೆದ್ದಾರಿ 169 ಎ ಮಾರ್ಗದ ಆಗುಂಬೆ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಿಸಲು ಕೇಂದ್ರ ಸಾರಿಗೆ ಸಚಿವ ನಿತಿಣ್ ಗಡ್ಕರಿ ಅವರ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೇಗರವಳ್ಳಿಯಿಂದ ಸೋಮೇಶ್ವರದವರೆಗಿನ 16 ಕಿ.ಮೀ. ದೂರದ ಈ ಮಾರ್ಗದಲ್ಲಿ ೬.೫೦ ಕಿ.ಮೀ ಸುರಂಗ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಈ ದೂರವನ್ನು ಕೇವಲ 20 ನಿಮಿಷದಲ್ಲಿ ಕ್ರಮಿಸಬಹುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts