More

  ಕೃಷಿಕರ ಸಂಕಷ್ಟಗಳಿಗೆ ಸ್ಪಂದಿಸದ ಸರ್ಕಾರಗಳು

  ಹಾನಗಲ್ಲ: ಸರ್ಕಾರ ಆಹಾರ ಉತ್ಪಾದನೆಗಾಗಿ ರೈತರನ್ನು ಕೃಷಿ ಕ್ಷೇತ್ರದಲ್ಲಿ ಬಳಸಿಕೊಳ್ಳುತ್ತಿದೆ. ಆದರೆ, ಹವಾಮಾನ ವೈಪರೀತ್ಯದಿಂದಾಗಿ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕುತ್ತಿಲ್ಲ. ಹೀಗಾಗಿ ರೈತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿತವಾಗುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಆತಂಕ ವ್ಯಕ್ತಪಡಿಸಿದರು.

  ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ಮಂಗಳವಾರ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

  ರೈತ ಸಮುದಾಯ ಎಲ್ಲ ಸಮಸ್ಯೆಗಳನ್ನೂ ಹೋರಾಟದ ಮೂಲಕವೇ ಬಗೆಹರಿಸಿಕೊಳ್ಳುವಂತಾಗುತ್ತಿದೆ. ಸರ್ಕಾರಗಳು ಕೃಷಿಯಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿಲ್ಲ. ರೈತರು ಹಾಗೂ ಕೃಷಿ ಕ್ಷೇತ್ರವನ್ನು ಚುನಾವಣಾ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

  ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಸಾವಯವ ಕೃಷಿ ಪದ್ಧತಿಯತ್ತ ರೈತರು ಬದಲಾಗದಿದ್ದರೆ ಭೂಮಿಯೂ ಬರಡಾಗುತ್ತದೆ. ರೈತರು ಮಳೆಗಾಗಿ ಪ್ರಕೃತಿಯೊಡನೆ ಹೋರಾಡುವ ಅನಿವಾರ್ಯ ಎದುರಾಗಿದೆ. ಕಾಲ-ಕಾಲಕ್ಕೆ ಕೃಷಿ ಪೂರಕ ಚರ್ಚೆ, ಚಿಂತನೆಗಳು ನಡೆಯಬೇಕು ಎಂದರು.

  ತಾಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ, ರೈತ ಹೋರಾಟದಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ನಮ್ಮ ಹೋರಾಟದಿಂದ ಎಲ್ಲ ರೈತರಿಗೂ ಲಾಭವಾಗುತ್ತದೆ ಎಂಬುದನ್ನು ಅರಿತುಕೊಂಡು ಮಾತನಾಡಬೇಕು ಎಂದರು.

  ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಗ್ರಾಮ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ, ಶಿವಬಸಪ್ಪ ಗೋವಿ, ಅಡಿವೆಪ್ಪ ಆಲದಕಟ್ಟಿ, ಮಹ್ಮದ್‌ಗೌಸ್ ಪಾಟೀಲ, ಮಹಲಿಂಗಪ್ಪ ಅಕ್ಕಿವಳ್ಳಿ, ಸೋಮಣ್ಣ ಜಡೆಗೊಂಡರ, ರಾಜೀವ ದಾನಪ್ಪನವರ, ಶ್ರೀಕಾಂತ ದುಂಡಣ್ಣನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ಶಿವಯ್ಯ ಎಮ್ಮೇರ, ಮೂಕಪ್ಪ ಹಂಚಿನಮನಿ, ಫಕೀರಪ್ಪ ಗೊಂದಿ, ಶಂಭುಲಿಂಗ ಹಿರೇಮಠ, ಮಹೇಶ ತಂಬೂಳಿ, ರುದ್ರಗೌಡ ಪಾಟೀಲ, ಫಕೀರಪ್ಪ ಅಪ್ಪಣ್ಣನವರ, ವೀರಪ್ಪ ತೊಗರಳ್ಳಿ ಇತರರು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts