More

    ಹತ್ರಾಸ್ ಘಟನೆ, ಯುಪಿ ಸರ್ಕಾರ ವಜಾಗೆ ಆಗ್ರಹ

    ಚಿಕ್ಕಮಗಳೂರು: ಉತ್ತರ ಪ್ರದೇಶ ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಜ್ಯಪಾಲರ ಆಳ್ವಿಕೆ ಜಾರಿಗೊಳಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಪಡಿಸಿವೆ.

    ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದವು.

    ಸಾಮಾಜಿಕ ನ್ಯಾಯ ಸಮಿತಿ ನೇತೃತ್ವದಲ್ಲಿ ಶನಿವಾರ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಯೋಗಿ ಆದಿತ್ಯನಾಥರ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಪಡಿಸಿದವು.

    ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್, ಉತ್ತರ ಪ್ರದೇಶ ಸರ್ಕಾರ ಗೂಂಡಾ ವರ್ತನೆಗೆ ಇಂಬು ನೀಡುತ್ತಿದ್ದು, ಮಹಿಳೆಯರು ಸುರಕ್ಷಿತವಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ಸಣ್ಣಪುಟ್ಟ ಘಟನೆಗಳು ನಡೆದಾಗ ಬೊಬ್ಬೆ ಹೊಡೆಯುವ ಸಂಸ್ಕೃತಿಯ ಬಿಜೆಪಿ ನಾಯಕರು ಇದೀಗ ದಲಿತ ಹೆಣ್ಣುಮಕ್ಕಳ ಅತ್ಯಾಚಾರ ಮತ್ತು ಕೊಲೆಯಾಗಿದ್ದರೂ ಕೂಡ ಜಾಣ ಮೌನಕ್ಕೆ ಶರಣಾಗಿರುವುದು ಲಜ್ಜೆಗೇಡಿತನ ಎಂದು ಟೀಕಿಸಿದರು.

    ಬಿಎಸ್​ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಸಂವಿಧಾನದ ಆಶ್ರಯ ಪಡೆದು ಅಧಿಕಾರ ನಡೆಸುತ್ತಿರುವ ಬಿಜೆಪಿ ಮುಖಂಡರು, ಸಂವಿಧಾನ ವಿರೋಧಿ ಕೃತ್ಯಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ಉತ್ತರ ಪ್ರದೇಶದ ದಲಿತ ಹೆಣ್ಣು ಮಗಳ ಅತ್ಯಾಚಾರ ಮತ್ತು ಹತ್ಯೆಯಾದಾಗ ಕ್ರಮ ಕೈಗೊಳ್ಳುವ ಬದಲು ಸಂತ್ರಸ್ತೆಯ ಮನೆಯ ಸುತ್ತಮುತ್ತ ನಿರ್ಬಂಧ ಹಾಕಿ ಆರೋಪಿಗಳ ರಕ್ಷಣೆಗೆ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts