Micro Finance ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ ರಾಜ್ಯಪಾಲರು; ಕಾರಣ ಹೀಗಿದೆ

Siddaramaiah Gehlot
Published on

ಬೆಂಗಳೂರು: ರಾಜ್ಯದಲ್ಲಿ ದಿನ ಕಳೆದಂತೆ ಮೈಕ್ರೋ ಫೈನಾನ್ಸ್​ (Micro Finance) ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಫೈನಾನ್ಸ್​ ಕಿರುಕುಳಕ್ಕೆ ನಲುಗಿ ಹೋಗಿದ್ದಾರೆ. ಮೈಕ್ರೋ ಫೈನಾನ್ಸ್​ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸುಗ್ರೀವಾಜ್ಞೆಯನ್ನು ಹೊರಡಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೆ ಇದೀಗ ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ.

ಮೈಕ್ರೋ ಫೈನಾನ್ಸ್ (Micro Finance) ಕುರಿತಾದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೆ ವಾಪಸ್​ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಹಲವು ಸ್ಪಷ್ಟನೆಯನ್ನು ಕೇಳಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಪಷ್ಟನೆ ನೀಡಿದ ನಂತರ ರಾಜ್ಯಪಾಲರು ಸಹಿ ಹಾಕಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.

ಸಹಿ ಹಾಕದಿರಲು ಕಾರಣವೇನು? 

ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಹರಿಸಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು 3 ಲಕ್ಷ ರೂ.ಗಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ‌ ಹೇಗೆ ಹಾಕುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ? ಆದರೆ, ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು.

ಇನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದೆ. ಈ ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ಸಾದಕಬಾಧಕ ಚರ್ಚಿಸಿ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮ‌ಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕದೆ ವಾಪಸ್ ಕಳಿಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net