More

    ಸ್ವಾಯತ್ತತೆ ಪ್ರಗತಿಯ ಸಂಕೇತ: ರಾಜಪಾಲ ಥಾವರ್ ಚಂದ್ ಗೆಹಲೋಟ್

    ಪುತ್ತೂರು: ಮೌಲ್ಯಯುತ ಮತ್ತು ಕೌಶಲಾಧಾರಿತ ಶಿಕ್ಷಣದ ಜೊತೆಗೆ ವಿವಿಧ ಆಯಾಮಗಳಲ್ಲಿ ಆತ್ಮನಿರ್ಭರ ಭಾರತದ ಉದ್ದೇಶವನ್ನು ಸಾಕಾರಗೊಳಿಸುವಲ್ಲಿ ವಿವೇಕಾನಂದ ಮಹಾವಿದ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಬಹುವಿಷಯಾಧಾರಿತ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆ ಪ್ರಸ್ತುತ ಸ್ವಾಯತ್ತ ಸ್ಥಾನಮಾನ ಪಡೆದಿದೆ. ಯಾವುದೇ ಸಂಸ್ಥೆ ಸ್ವಾಯತ್ತತೆ ಪಡೆಯುವುದು ಪ್ರಗತಿಯ ಶುಭಸಂಕೇತ ಎಂದು ರಾಜ್ಯದ ರಾಜಪಾಲ ಥಾವರ್ ಚಂದ್ ಗೆಹಲೋೀಟ್ ಹೇಳಿದರು.
    ಪುತ್ತೂರುವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸ್ವಾಯತ್ತ ಮಾನ್ಯತೆಯ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
    ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವರ್ತಮಾನ ಹಾಗೂ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತಗೊಳಿಸಲಿದೆ. ಪ್ರಪ್ರಥಮವಾಗಿ ರಾಷ್ಟ್ರೀೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ ಗರಿಮೆ ರಾಜ್ಯಕ್ಕಿದೆ. ರಾಷ್ಟ್ರದ ಅಖಂಡತೆ, ರಾಷ್ಟ್ರೀಯತೆ ಆಧಾರಿತ ಸಮಾಜದ ದೃಷ್ಟಿಕೋನ, ಮಾತೃಭಾಷೆಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡಲಾಗಿದೆ. ಧರ್ಮ-ಸಂಸ್ಕೃತಿಯ ರಕ್ಷಣೆ, ಸಮಾಜದ ಉದ್ದೇಶಗಳನ್ನು ಶಿಕ್ಷಣದ ಮೂಲಕ ಈಡೇರಿಸುವ ವಿಶ್ವಾಸವಿದೆ ಎಂದರು.
    ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಸರಕಾರ್ಯವಾಹ ಮುಕುಂದ್ ಸಿ ಆರ್ ಅವರು ಸಮಾಹಿತ ಸ್ವಾಯತ್ತತೆಯ ಕುರಿತ ಸ್ಮರಣಸಂಚಿಕೆ ಬಿಡುಗಡೆಗೊಳಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ.ಕೃಷ್ಣಭಟ್, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ್ ಹೆಚ್.ಜಿ., ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಚಾರ್ಯ ವಿಷ್ಣುಗಣಪತಿ ಭಟ್ ಉಪಸ್ಥಿತರಿದ್ದರು.
    ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸ್ವಾಗತಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಸರಸ್ವತಿ, ಆಂಗ್ಲ ಭಾಷಾ ಉಪನ್ಯಾಸಕಿ ಸರಸ್ವತಿ ಸಿ.ಕೆ. ಕಾರ್ಯಕ್ರಮ ನಿರೂಪಿಸಿದರು.

    ಸಮಾಜದ ಅವಶ್ಯಕತೆ ಬದಲಾದಂತೆ ಶಿಕ್ಷಣದ ವ್ಯಾಪ್ತಿಯೂ ವಿಸ್ತಾರಗೊಳ್ಳುತ್ತದೆ. ವಿದ್ಯಾಸಂಸ್ಥೆಯ ಉದ್ದೇಶವನ್ನು ಪರಿಣಾಮಕಾರಿಯಾಗಿ ಮತ್ತು ಪ್ರಖರವಾಗಿ ರಾಷ್ಟ್ರದ ಜನಜೀವನದಲ್ಲಿ ಮೂಡಿಸುವುದಕ್ಕೆ ಸಿಕ್ಕ ಬೃಹತ್ ನೆಗೆತ ಸ್ವಾಯತ್ತತೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ಶಿಕ್ಷಣದ ಪ್ರತಿ ವಿಷಯವನ್ನು ಹಲವು ಆಯಾಮಗಳಲ್ಲಿ ಆಲೋಚನೆ ಮಾಡುವುದಕ್ಕೆ ಸ್ವಾಯತ್ತತೆ ಸಹಕಾರಿ.
    | ಮುಕುಂದ್ ಸಿ ಆರ್.
    ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಸರಕಾರ್ಯವಾಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts