ರಾಜ್ಯಪಾಲರ ಅನುಮತಿ ಸಂಪೂರ್ಣ ಕಾನೂನು ಬಾಹಿರ;  ಕೃಷ್ಣ ಬೈರೇಗೌಡ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವಿರುದ್ಧ ರಾಜ್ಯಪಾಲರು ಅನುಮತಿ ನೀಡಿರುವುದು ಸಂಪೂರ್ಣ ಕಾನೂನುಬಾಹಿರ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡುವ ಮೊದಲು ಪ್ರಾಥಮಿಕ ತನಿಖೆ ನಡೆಯಬೇಕು. ಭಾರತ ಸರ್ಕಾರ ಸೆಪ್ಟೆಂಬರ್ 3, 2021 ರಲ್ಲಿ 17 ಎ ಸೆಕ್ಷನ್ ಅನ್ನು ಹೇಗೆ ಪರಿಗಣಿಸಬೇಕೆಂದು ನಿಯಮಾವಳಿ ರೂಪಿಸಿದೆ. ಅಂದರೆ ಪೊಲೀಸ್ ಅಧಿಕಾರಿ ಒಂದು ಹುದ್ದೆಯಲ್ಲಿ ಇರುವ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಲು ಈ ಸೆಕ್ಷನ್ ಅಡಿ ಅನುಮತಿ ಪಡೆಯಬೇಕು. ಪ್ರಸ್ತುತ ಈ ಪ್ರಕರಣದಲ್ಲಿ ಯಾವ ಪೊಲೀಸ್ ಅಧಿಕಾರಿ ಅನುಮತಿ ಪಡೆದಿದ್ದಾರೆ? ಎಂದು ಪ್ರಶ್ನಿಸಿದರು.

17 ಎ ಸೆಕ್ಷನ್ ಇರುವುದೇ ಪೊಲೀಸ್ ಅಧಿಕಾರಿಗಳು ಅನುಮತಿ ಪಡೆಯುವ ಸಲುವಾಗಿ. ರಾಜ್ಯಪಾಲರೇ ಯಾವ ಪೊಲೀಸ್ ಅಧಿಕಾರಿಯು ತನಿಖೆಗೆ ಅನುಮತಿ ನೀಡಿ ಎಂದು ನಿಮಗೆ ವರದಿ ನೀಡಿದ್ದಾರೆ? ಯಾವ ಪೊಲೀಸ್ ಅಧಿಕಾರಿ ನಿಮಗೆ ಅನುಮತಿ ಕೇಳಿದ್ದಾರೆ ಆ ದಾಖಲೆ ಕೊಡಿ ಎಂದು ಕೇಳಿದರು.

ಪೊಲೀಸ್ ಅಧಿಕಾರಿಗಳು ತನಿಖೆಗೆ ಅನುಮತಿ ನೀಡಿ ಎಂದು ಈ ಹಿಂದೆ ಕೇಳಿರುವ ನಾಲ್ಕು ಪ್ರಕರಣಗಳು ನಿಮ್ಮ ಮುಂದೆ ಬಾಕಿ ಇವೆ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಜನಾರ್ದನ್ ರೆಡ್ಡಿ ಅವರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೇಳಿದ್ದರೂ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವ ಪೊಲೀಸ್ ಆಫೀಸರ್ ಕೂಡ ಅನುಮತಿ ಕೇಳದಿದ್ದರೂ ಏಕೆ ನೀಡಿದ್ದೀರಾ ಎಂದು ಕೆಣಕಿದರು.
ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಾಗ ಪ್ರಕರಣದಲ್ಲಿ ತಪ್ಪು ಮಾಡಿರುವವರ ವಿರುದ್ಧ ದಾಖಲೆ ಇರಬೇಕು. ಯಾರ ಮೇಲೆ ಆಪಾದನೆ ಬಂದಿದೆ ಅವರು ಯಾವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ ಎಂಬುದನ್ನು ದಾಖಲೆ ಸಮೇತ ಪೊಲೀಸರು ರಾಜ್ಯಪಾಲರಿಗೆ ನೀಡಬೇಕು. ಆಗ ಮಾತ್ರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಾಧ್ಯ. ಭಾರತ ಸರ್ಕಾರವು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮುಂಚೆ ಯಾವ, ಯಾವ ದಾಖಲೆಗಳನ್ನು ಒದಗಿಸಬೇಕು ಎಂಬುದಕ್ಕೆ ಪಟ್ಟಿಯನ್ನು ನೀಡಿದ್ದಾರೆ. ಇವುಗಳಲ್ಲಿ ಒಂದೇ ಒಂದು ದಾಖಲೆಯನ್ನು ರಾಜ್ಯಪಾಲರು ತೋರಿಸಲಿ ಎಂದು ಸವಾಲು ಹಾಕಿದರು.

ತನಿಖೆಗೆ ಅನುಮತಿ ಕೊಡಿ ಎಂದು ಮನವಿ ಮಾಡುವ ಅಧಿಕಾರ ಇರುವುದು ಡೈರೆಕ್ಟರ್ ಜನರಲ್ ಆ್ ಪೊಲೀಸ್ ಅವರಿಗೆ ಮಾತ್ರ. ಪ್ರಸ್ತುತ ರಾಜ್ಯಪಾಲರು ಅನುಮತಿ ನೀಡಿರುವುದು ಸಂಪೂರ್ಣ ಕಾನೂನುಬಾಹಿರ. ಇತ್ತೀಚಿಗೆ ಜಸ್ಟಿಸ್ ನಾಗರತ್ನ ಅವರು ರಾಜ್ಯಪಾಲರು ಕೇವಲ ಒಂದು ಪಕ್ಷದ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಸಿದ್ದರಾಮಯ್ಯ ಅವರು ಬಹುಮತ ಪಡೆದು ಆಯ್ಕೆಯಾದ ಮುಖ್ಯಮಂತ್ರಿ. ಅವರು ಕನ್ನಡಿಗರ ಸ್ವಾಭಿಮಾನದ ಸಂಕೇತ.

ರಾಜ್ಯಪಾಲರ ನಡೆ ಕರ್ನಾಟಕದ ಮೇಲೆ ಕನ್ನಡಿಗರ ಮೇಲೆ ಮಾಡುತ್ತಿರುವ ಪ್ರಹಾರ ಎಂದು ಕೃಷ್ಣ ಬೈರೇಗೌಡ ರಾಜ್ಯಪಾಲರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
————————-

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…