Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ಕುಂಟ ಕುರುಡರ ಸರ್ಕಾರ ಎಂದಿದ್ದ ಕಾರಜೋಳಗೆ ಸಂಕಷ್ಟ

Thursday, 12.07.2018, 8:19 PM       No Comments

ಮಂಡ್ಯ: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ಸದನದಲ್ಲೇ “ಇದು ಕುಂಟ ಕುರುಡರ ಸರ್ಕಾರ,” ಎಂದಿದ್ದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಅವರಿಗೆ ಸಂಕಷ್ಟ ಎದುರಾಗಿದೆ. ತಮ್ಮನ್ನು ಅವಹೇಳನ ಮಾಡಿದ್ದಾರೆಂದು ಅಂಗವಿಕಲರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎರಡು ದಿನಗಳ ಸದನದಲ್ಲಿ ಮಾತನಾಡುತ್ತಿದ್ದ ಬಿಜೆಪಿ ಶಾಸಕ ಗೋವಿಂದ ಕಾರಜೋಳ, ” ಇದು ಕುಂಟ, ಕುರಡರ ಸರ್ಕಾರ. ಕುರಡನಿಗೆ (ಕಾಂಗ್ರೆಸ್​) ಕಣ್ಣು ಕಾಣಿಸುವುದಿಲ್ಲ ಹಾಗಾಗಿ, ಕಣ್ಣು ಕಾಣಿಸುವ ಕುಂಟನನ್ನು(ಜೆಡಿಎಸ್​) ಕುರುಡ ತಲೆಯ ಮೇಲೆ ಕೂರಿಸಿಕೊಂಡು ಮುಂದೆ ನಡೆಯುತ್ತಾನೆ. ಹಾಗಿದೆ ಈ ಸರ್ಕಾರದ ಸ್ಥಿತಿ,” ಎಂದು ಗೋವಿಂದ ಕಾರಜೋಳ ಅವರು ಸರ್ಕಾರವನ್ನು ಟೀಕಿಸಿದ್ದರು.

ಈ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯ ಅಂಗವಿಕಲರ ಒಕ್ಕೂಟದ ಎಂ.ಎಸ್​. ಚೆಲುವರಾಜು ಅವರು ಮಂಡ್ಯ ಪಶ್ಚಿಮ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾರಜೋಳ ಅವರು, ಅಂಗವಿಕಲರ ಕಾಯ್ದೆ, ಸಮಾನ ಅವಕಾಶ ಹಕ್ಕುಗಳ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೆ, ಗೋವಿಂದ ಕಾರಜೋಳ ಅವರು ಈ ಕೂಡಲೇ ಅಂಗವಿಕಲರ ಕ್ಷಮೆ ಕೋರಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಅಂಗವಿಕಲರ ಒಕ್ಕೂಟದ ಅಧ್ಯಕ್ಷ ಚೆಲುವರಾಜು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top