More

    123 ಶಾಲೆಗಳಲ್ಲಿ ಆವಿಷ್ಕಾರ್ ಇನ್ನೋವೇಟಿವ್ ಲ್ಯಾಬ್

    ಬೆಂಗಳೂರು: ಹೊಸ ಕಲ್ಪನೆಗಳನ್ನು ವಾಸ್ತವಕ್ಕೆ ತರಲು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸಲು 73 ಪಬ್ಲಿಕ್ ಶಾಲೆ ಹಾಗೂ 50 ಆದರ್ಶ ವಿದ್ಯಾಲಯಗಳಲ್ಲಿ ಆವಿಷ್ಕಾರ್ ಇನ್ನೋವೇಟಿವ್ ಲ್ಯಾಬ್ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ.

    20 ಕೋಟಿ ರೂ.ವೆಚ್ಚದಲ್ಲಿ 93 ಮಹತ್ವಾಕಾಂಕ್ಷಿ ತಾಲೂಕುಗಳಲ್ಲಿನ ಒಟ್ಟು 123 ಶಾಲೆಗಳಲ್ಲಿ ಈ ಪ್ರಯೋಗಾಲಯಗಳು ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

    ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ, 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿನ 4 ಪದವಿ ಪೂರ್ವ ಕಾಲೇಜು ಒಳಗೊಂಡಂತೆ ಮಹತ್ವಾಕಾಂಕ್ಷಿ ತಾಲೂಕುಗಳಲ್ಲಿನ 73 ಕೆ.ಪಿಎಸ್.ಶಾಲೆಗಳು ಹಾಗೂ 50 ಆದರ್ಶ ವಿದ್ಯಾಲಯಗಳಲ್ಲಿ ಈ ಪ್ರಯೋಗಾಲಯ ಸ್ಥಾಪನೆಗೊಳ್ಳಲಿವೆ ಎಂದು ತಿಳಿಸಿದರು.

    ಮುಖ್ಯ ಕಾರ್ಯದರ್ಶಿ ನೇಮಕ

    ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಈ ತಿಂಗಳು ನಿವೃತ್ತರಾಗಲಿದ್ದಾರೆ. ಹೊಸ ನೇಮಕ ಬಗ್ಗೆ ಚರ್ಚೆ ಮಾಡಲಾಗಿದ್ದು, ಜೇಷ್ಠತೆ ಆಧಾರದಲ್ಲಿ ರಜನೀಶ್ ಗೋಯಲ್, ವಿ. ಮಂಜುಳಾ, ಅಜಯ್ ಸೇಠ್, ಅನಿಲ್‌ಕುಮಾರ್ ಝಾ, ಜಾವೇದ ಅಖ್ತರ್, ಗೌರವ್ ಗುಪ್ತಾ, ವಂದನಾ ಗುರ್ನಾನಿ, ಉಮಾ ಮಹದೇವನ್, ತುಷಾರ್ ಗಿರಿನಾಥ್ ಹೆಸರು ಪ್ರಸ್ತಾಪವಾದವು. ಈ ವಿಷಯದಲ್ಲಿ ಮುಖ್ಯಮಂತ್ರಿಗಳಿಗೇ ನಿರ್ಣಯ ಕೈಗೊಳ್ಳುವ ಅಧಿಕಾರವನ್ನು ನೀಡಲಾಯಿತು ಎಂದರು.
    ರಾಜ್ಯಪಾಲರ ಸಚಿವಾಲಯಕ್ಕೆ ಗುತ್ತಿಗೆ ಆಧಾರದಲ್ಲಿ ಸರ್ಜನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿ ಡಾ. ನವೀನ್ ಕುಮಾರ್ ಅವರನ್ನು ಇನ್ನೂ ಒಂದು ವರ್ಷ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
    ಲೋಕಾಯುಕ್ತಕ್ಕೆ ಲೆಕ್ಕಾಧಿಕಾರಿ ಐದು ಹುದ್ದೆ ಇದ್ದು, ಮೂರು ಹುದ್ದೆಗೆ ನಿವೃತ್ತರನ್ನು ನೇಮಕ ಮಾಡಿಕೊಳ್ಳಲು ನಿರ್ಣಯಿಸಲಾಗಿದೆ. ಜಯರಾಮಯ್ಯ, ಲೋಕೇಶ್ ಹಾಗೂ ಗಾಯತ್ರಿ ಅವರಿಗೆ ಅವಕಾಶ ಸಿಗಲಿದೆ. ಉಳಿದ ಎರಡು ಹುದ್ದೆಗಳು ಖಾಲಿ ಉಳಿಯುತ್ತವೆ. ಅವುಗಳನ್ನು ಹಂತ ಹಂತವಾಗಿ ನೇಮಕ ಮಾಡಲು ನಿರ್ಣಯಿಸಲಾಗಿದೆ ಎಂದು ಹೇಳಿದರು.

    ನಾಗಮಣಿ ಕಡ್ಡಾಯ ನಿವೃತ್ತಿ

    ಚಿತ್ರದುರ್ಗದಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಎಸ್.ಡಿ. ನಾಗಮಣಿ ಅವರು ಲೋಕಾಯುಕ್ತ ದಾಳಿಗೆ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಅವರನ್ನು ಉಪ ಲೋಕಾಯುಕ್ತರ ಶಿಾರಸಿನ ಅನ್ವಯ ನಾಗಮಣಿ ಅವರನ್ನು ಕಡ್ಡಾಯ ನಿವೃತ್ತಿಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.

    ಕನಕಪುರ ಆಸ್ಪತ್ರೆಗೆ ಹೆಚ್ಚು ಸವಲತ್ತು

    ಕನಕಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಇನ್ಫೋಸಿಸ್ ಸಂಸ್ಥೆ ಕಟ್ಟಡ ಕಟ್ಟಿಕೊಟ್ಟಿದ್ದು, ಇಲ್ಲಿಗೆ ಹೆಚ್ಚುವರಿ ಉಪಕರಣ, ಜನರೇಟರ್ ಹಾಗೂ ಇತರೆ ಕಾಮಗಾರಿಗೆ 10.34 ಕೋಟಿ ರೂ. ಬಿಡುಗಡೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

    ಸಂವಿಧಾನ ದಿನಾಚರಣೆ ಪ್ರಯುಕ್ತ ಸಮ್ಮೇಳನ

    ಸಂವಿಧಾನ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸಮ್ಮೇಳನವನ್ನು ನ.26ರಂದು ಮಾಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ 18 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. ಅದಕ್ಕೆ ಸಂಪುಟ ಸಭೆ ಆಡಳಿತಾತ್ಮಕ ಅನುಮೋದೆ ನೀಡಿದೆ. ಈ ಕಾರ್ಯಕ್ರಮದ ರೂಪುರೇಷೆ ಒಂದೆರಡು ದಿನದಲ್ಲಿ ಸಿದ್ಧಗೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

    ಹೊಸ ಬಸ್ ಖರೀದಿಗೆ ಒಪ್ಪಿಗೆ

    ವಾಯುವ್ಯ ಸಾರಿಗೆ ಸಂಸ್ಥೆಗೆ 16.20 ಕೋಟಿ ವೆಚ್ಚದಲ್ಲಿ ಬಸ್ ಖರೀದಿಗೆ ಒಪ್ಪಿಗೆ ನೀಡಲಾಗಿದೆ. 6 ಎಸಿ ಬಸ್ ಹಾಗೂ 24 ಇತರೆ ಬಸ್ ಖರೀದಿಗೆ ಅನುಮೋದೆ ನೀಡಲಾಗಿದೆ. ಹುಬ್ಬಳ್ಳಿ ಬಿಆರ್‌ಟಿಗೆ 45 ಕೋಟಿ ರೂ. ವೆಚ್ಚದಲ್ಲಿ 100 ಬಸ್ ಖರೀದಿಗೂ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ ಎಂದು ಹೇಳಿದರು.

    ಕರ್ನಾಟಕ ಜನನ ಮರಣ ನೋಂದಣಿ ನಿಯಮ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ನೋಂದಣಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಲಿ ಪಾವತಿಸುತ್ತಿರುವ ವಿಳಂಬ ಶುಲ್ಕವನ್ನು ಪರಿಷ್ಕರಿಸಲು ನಿಯಮಗಳಿಗೆ ತಿದ್ದುಪಡಿ ಮಾಡಲು ಈ ಬಗ್ಗೆ ಸಹಾಯಕ ಆಯುಕ್ತರಿಗೆ ನೀಡಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ. ಈ ಸಂಬಂಧ ಅರ್ಜಿ ಶುಲ್ಕವನ್ನು 200 ರೂ.ಗೆ ಹೆಚ್ಚಿಸಲಾಗಿದೆ.

    ಪೋಷಣ್ ಅಭಿಯಾನಕ್ಕೆ 29.90 ಕೋಟಿ ರೂ. ವೆಚ್ಚದಲ್ಲಿ ಉಪಕರಣಗಳ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಗ್ರೋಥ್ ಮಾನಿಟರಿಂಗ್ ಡಿವೈಸ್ ಖರೀದಿಗೆ ಈ ಹಣ ವ್ಯಯಿಸಲಾಗುತ್ತದೆ. ಇವು ಕೇವಲ ತೂಕದ ಯಂತ್ರಗಳಲ್ಲಿ ಮಕ್ಕಳ ಬೆಳವಣಿಗೆ ಕುರಿತು ಬೇರೆ ಬೇರೆ ಮಾಹಿತಿಯನ್ನು ಕೊಡುವ ತಂತ್ರಜ್ಞಾನ ಆಧಾರಿತ ಯಂತ್ರಗಳಾಗಿವೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು.

    ಬಾಗಲಕೋಟೆ ಮುಧೋಳ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಕಬ್ಬು ಅರೆಯಲು ಆರಂಭಿಸುವ ಬಗ್ಗೆ ಚರ್ಚೆಯಾಗಿದೆ. ಬಿಡಿಸಿಸಿ ಅಥವಾ ಅಪೆಕ್ಸ್ ಬ್ಯಾಂಕ್‌ನಿಂದ 40 ಕೋಟಿ ರೂ. ಸಾಲ ಪಡೆಯಲು ಸರ್ಕಾರದ ಖಾತ್ರಿ ನೀಡಲು ನಿರ್ಣಯಿಸಲಾಗಿದೆ. ಗುತ್ತಿಗೆ ನೀಡುವ ಟೆಂಡರ್ ದಾಖಲೆಗೆ ಅನುಮೋದನೆ ನೀಡಿದ್ದು, ಕೆಟಿಟಿಪಿ ಕಾಯ್ದೆಯಡಿ ಟೆಂಡರ್ ಕರೆಯಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ 2.0 ಅಡಿ ಬಾಗಲಕೋಟೆ ಜಿಲ್ಲೆ ಬಾದಾಮಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ(ನಿಪ್ಪಾಣಿ), ಮಂಡ್ಯ ಜಿಲ್ಲೆಯ ಮಂಡ್ಯ, ರಾಮನಗರ ಜಿಲ್ಲೆಯ ಚನ್ನಪಟ್ಟಣ, ಉತ್ತರ ಕನ್ನಡ ಜಿಲ್ಲೆಯ ಶಿರಸಿಗಳಲ್ಲಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮದ ಮೂಲಕ 15 ಸಾವಿರ ಹೆ. ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಸಮ್ಮಿತಿ ನೀಡಿದೆ.
    ರೈತರ ಆದಾಯ ವೃದ್ಧಿಸುವ ಅವಕಾಶಗಳಿಗೆ ಈ ಯೋಜನೆಯಡಿ ಹೆಚ್ಚಿನ ಉತ್ತೇಜನ ದೊರೆಯಲಿದೆ. ಜತೆಗೆ ರೈತ ಉತ್ಪಾದಕರ ಸಂಸ್ಥೇಗಳನ್ನು ರಚಿಸಿ ಅವುಗಳನ್ನು ಬಲಪಡಿಸುವ ಉದ್ದೇಶವೂ ಈ ಯೋಜನೆಯಲ್ಲಿ ಅಡಕವಾಗಿದೆ.

    2023-24ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಸಲ್ ವಿಮಾ ಯೋಜನೆ ಅನುಷ್ಠಾನಕ್ಕಾಗಿ ವಿಮಾ ಸಂಸ್ಥೆಗಳನ್ನು ನಿಗದಿಪಡಿಸಲಾಗಿದೆ. ಖಾಸಗಿ ಕಂಪನಿಗಳಿಗೆ ಕ್ಲಸ್ಟರ್ ಹಂಚಿಕೆ ಮಾಡಿ ಕೃಷಿ ಆಯುಕ್ತರಿಂದ ಹೊರಡಿಸಿರುವ ಕಾರ್ಯಾದೇಶಗಳಿಗೆ ಘಟನೋತ್ತರ ಮಂಜೂರಾತಿ ನೀಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts