More

    ಗುಡ್ ಆ್ಯಂಡ್ ಬ್ಯಾಡ್ ಟಚ್ ಯಾವುದೆಂದು ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿ ಎಂದ ಸರ್ಕಾರ

    ಬೆಂಗಳೂರು ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ನಿಲಯಗಳಲ್ಲಿರುವ ಎಲ್ಲ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ, ಒಳ್ಳೆಯ ಮತ್ತು ಕೆಟ್ಟ ಸ್ಪರ್ಶ ಹಾಗೂ ಪೋಕ್ಸೋ ಕಾಯ್ದೆಗಳ ಕುರಿತು ಅರಿವು ಮೂಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

    ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿಯನ್ನೇ ನೇಮಕ ಮಾಡಬೇಕೆಂಬ ಆದೇಶ ಹೊರಡಿಸಲಾಗಿದೆ. ಆದರೆ, ವಸತಿ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯಗಳಾಗುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಅರಿವು ಮೂಡಿಸುವಂತೆ ಇಲಾಖೆ ಅಧೀನ ಕಾರ್ಐದರ್ಶಿ-1 ಆದೇಶ ಹೊರಡಿಸಿದ್ದಾರೆ.

    ರಾಜ್ಯದಲ್ಲಿ 1,231 ಮೆಟ್ರಿಕ್ ಪೂರ್ವ ಮತ್ತು 277 ಮೆಟ್ರಿಕ್ ನಂತರದ ವಿದ್ಯಾರ್ಥಿನಿಯಗಳಿವೆ. 6ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ 90,601 ಮತ್ತು ಮೆಟ್ರಿಕ್ ನಂತರ 41,494 ಸೇರಿ 1,32,095 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳಲ್ಲಿ ಲೈಂಗಿಕ ದೌರ್ಜನ್ಯದ ಬಗ್ಗೆ ಅರಿವು ಮೂಡಿಸುವುದು. ನುರಿತ ಮಹಿಳಾ ಅಧಿಕಾರಿ ಅಥವಾ ಸಮಾಲೋಚಕರಿಂದ ಒಳ್ಳೆಯ ಮತ್ತು ಕೆಟ್ಟ ಸ್ಪರ್ಶ (ಗುಡ್ ಆ್ಯಂಡ್ ಬ್ಯಾಡ್ ಟಚ್) ಗಳ ಬಗ್ಗೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಅರಿವುದ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ.

    ಹಾಗೆಯೇ ಎಲ್ಲ ಬಾಲಕಿಯರ ಮಾನಸಿಕ ಅಭಿವೃದ್ಧಿಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಸಮಾಲೋಚನಾ ಕೇಂದ್ರಗಳನ್ನು ಸ್ಥಾಪಿಸಸಬೇಕು. ಕಾರ್ಯಕ್ರಮ ಅನುಷ್ಠಾನಕ್ಕಾಗಿ ಜಿಪಂ ಸಿಇಒ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಜಂಟಿ/ಉಪ ನಿರ್ದೇಶಕರನ್ನು ಒಳಗೊಂಡ ಸಮಿತಿ ರಚನೆ ಮಾಡಬೇಕು. ಎಲ್ಲ ಹಾಸ್ಟೆಲ್‌ಗಳಳ್ಲಿ ಮಕ್ಕಳ ಸಹಾಯವಾಣಿ 1098 ಹಾಗೂ ಇಲಾಖಾ ಸಹಾಯವಾಣಿಯನ್ನು ಪ್ರದರ್ಶಿಸಬೇಕು ಎಂಬ ಸೂಚನೆ ನೀಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts