More

    ಅಕ್ರಮ ಹಣ ವರ್ಗಾವಣೆ ಪ್ರಕರಣ; ಮಹದೇವ ಸೇರಿದಂತೆ 22 ಬೆಟ್ಟಿಂಗ್​ ಆ್ಯಪ್​ ನಿಷೇಧಿಸಿದ ಕೇಂದ್ರ ಸರ್ಕಾರ

    ನವದೆಹಲಿ: ಮಹದೇವ ಬೆಟ್ಟಿಂಗ್​ ಆ್ಯಪ್​ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಪ್ರಕಟಿಸಿದ್ದು, ಮಹದೇವ್ ಬುಕ್ ಆನ್‌ಲೈಲ್​ ಸೇರಿದಂತೆ ಇತರೆ 22 ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

    ಈ ಕುರಿತು ಅಧಿಕೃತ ಆದೇಶ ಒಂದನ್ನು ಹೊರಡಿಸಿರುವ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯದ ಶಿಫಾರಸ್ಸಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಕಾನೂನುಬಾಹಿರ ಅಪ್ಲಿಕೇಷನ್​ಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ.

    ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಡಿಯೋ ವೈರಲ್​; ಮನನೊಂದು ಪ್ರಾಣ ಕಳೆದುಕೊಂಡ ಅಪ್ರಾಪ್ತ ವಯಸ್ಕಳು

    ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್, ಸೆಕ್ಷನ್ 69A ಐಟಿ ಕಾಯಿದೆ ಅಡಿಯಲ್ಲಿ ವೆಬ್‌ಸೈಟ್, ಆ್ಯಪ್ ಅನ್ನು ನಿಷೇಧಿಸುವ ಎಲ್ಲಾ ಅಧಿಕಾರವನ್ನು ಛತ್ತೀಸ್‌ಗಢ ಸರ್ಕಾರ ಹೊಂದಿದೆ. ಆದರೆ, ಅವರು ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಕಳೆದ ಒಂದೂವರೆ ವರ್ಷದಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ ತನಿಖೆ ನಡೆಸುತ್ತಿದೆ. ವಾಸ್ತವವಾಗಿ, ED ಯಿಂದ ಮೊದಲ ಮತ್ತು ಏಕೈಕ ಮನವಿ ಸ್ವೀಕರಿಸಲಾಗಿದೆ. ಅದರ ಆಧಾರದ ಮೇಲೆ ಕಾರ್ಯನಿರ್ವಹಿಸಲಾಗಿದೆ ಎಂದು ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್ ತಿಳಿಸಿದ್ದಾರೆ.

    ಮಹದೇವ ಬೆಟ್ಟಿಂಗ್​ ಆ್ಯಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಸೆಕ್ಷನ್ 19 ರ ಅಡಿಯಲ್ಲಿ ಸಂಸ್ಥೆಯ ಮಾಲೀಕರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಳೆದ ವಾರ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್‌ಗೆ ಸುಮಾರು 508 ಕೋಟಿ ರೂ. ನೀಡಿರುವ ಕುರಿತು ಫೋರೆನ್ಸಿಕ್ ವಿಶ್ಲೇಷಣೆ ಮತ್ತು ‘ಕ್ಯಾಶ್ ಕೊರಿಯರ್’ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯ ಕ್ರಮಕ್ಕೆ ಆಗ್ರಹಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts