

ಉತ್ತರಕನ್ನಡ: ಯಲ್ಲಾಪುರದ ಆರತಿಬೈಲ್ ಬಳಿ ಸೋಮವಾರ ಮಧ್ಯಾಹ್ನ ಸಾರಿಗೆ ಬಸ್ ಅಪಘಾತಕ್ಕೀಡಾಗಿದ್ದು, 25 ವಿದ್ಯಾರ್ಥಿಗಳು ಸೇರಿ 37 ಮಂದಿ ಗಾಯಗೊಂಡಿದ್ದಾರೆ.
ಕಳಚೆಯಿಂದ ಯಲ್ಲಾಪುರ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣತಪ್ಪಿ, ಧರೆಗೆ ಅಪ್ಪಳಿಸಿದ ಪರಿಣಾಮ ಬಸ್ನ ಮುಂಭಾಗ ಜಖಂಗೊಂಡಿದೆ. ಇದನ್ನೂ ಓದಿರಿ ಸರ್ಕಾರಿ ಆಸ್ಪತ್ರೆ ಬೆಡ್ ಮೇಲೆ ರೊಮಾನ್ಸ್, ಆಶಾ ಕಾರ್ಯಕರ್ತೆ ಜತೆ ಯುವಕನ ಲವ್ವಿಡವ್ವಿ ವಿಡಿಯೋ ವೈರಲ್
ಬಸ್ನಲ್ಲಿ ಬಹುತೇಕ ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.