ಸರ್ಕಾರಿ ನೌಕರರ ಸಂಘದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಜ.10 ರಂದು ಚಾಲನೆ

blank

ಮಡಿಕೇರಿ : ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಜನವರಿ 10 ರಂದು ಚಾಲನೆ ದೊರಕಲಿದೆ ಎಂದು ಸಂಘದ ಅಧ್ಯಕ್ಷ ಕೆ.ಪಿ.ರವಿ ತಿಳಿಸಿದರು.

ನಗರದ ಜನರಲ್ ತಿಮ್ಮಯ್ಯ (ಮ್ಯಾನ್ಸ್ ಕಾಂಪೌಂಡ್) ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಜನ ಸೇವಾ ಮತ್ತು ಸಬಲೀಕರಣ ಇಲಾಖೆ ಸಹಯೋಗದಲ್ಲಿ ನಡೆಯಲಿರುವ ಪಂದ್ಯಾಟ ಜ.11 ರವರೆಗೆ ನಡೆಯಲಿದೆ. ಆಸಕ್ತ ಸರ್ಕಾರಿ ಖಾಯಂ ನೌಕರರು ಜ.11 ರ ಬೆಳಗ್ಗೆ 9.30ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

40 ವರ್ಷ ಒಳಪಟ್ಟ ಪುರುಷ ವಿಭಾಗಕ್ಕೆ ವಿವಿಧ ಹಂತದ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ವಾಲಿಬಾಲ್, ಫುಟ್ಬಾಲ್, ಹಾಕಿ, ಕಬ್ಬಡಿ, ಕ್ರಿಕೆಟ್, ಚೆಸ್, ಟೇಬಲ್ ಟೆನ್ನಿಸ್, ಕೇರಂ, ವಿವಿಧ ತೂಕದ ಅನುಸಾರ ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ದೇಹಧಾರ್ಡ್ಯ ಸ್ಪರ್ಧೆ. 35 ವಯೋಮಾನದೊಳಗಿನ ಮಹಿಳೆಯರಿಗೆ ವಿವಿಧ ಹಂತದ ಓಟ, ಉದ್ದಜಿಗಿತ, ಎತ್ತರ ಜಿಗಿತ, ಸಿಂಗಲ್, ಡಬಲ್ ವಿಭಾಗದಲ್ಲಿ ಲಾನ್ ಟೆನ್ನಿಸ್ ಪಂದ್ಯಾಟ ನಡೆಯಲಿದೆ.

ಕ್ಲಾಸಿಕಲ್, ಶಾಸ್ತ್ರೀಯ ಸಂಗೀತ, ವಿವಿಧ ನಾಟ್ಯ ಪ್ರಾಕರ, ಜಾನಪದ ಗೀತೆ, ಕರಕುಶಲ ವಸ್ತುಗಳ ಪ್ರದರ್ಶನ, ನಾಟಕ, ಜಾನಪದ ನೃತ್ಯ ಸ್ಪರ್ಧೆ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸ್ಪರ್ಧಾತಿಗಳು ಖಾಯಂ ಸರ್ಕಾರಿ ನೌಕರರಾಗಿರಬೇಕು. ದೈಹಿಕ ಶಿಕ್ಷಕರು, ಕ್ರೀಡಾ ಇಲಾಖೆ ತರಬೇತುದಾರರು ಭಾಗವಹಿಸುವಂತಿಲ್ಲ, ಒಬ್ಬ ಸ್ಪರ್ಧಿ ಅಥ್ಲೆಟಿಕ್ಸ್ ನಲ್ಲಿ ಮೂರು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಸಂಘದ ಕಾರ್ಯದರ್ಶಿ ಅರುಣ್ ಕುಮಾರ್, ಖಜಾಂಜಿ ರಾಜೇಶ್ ಪಿ.ಡಿ, ಕ್ರೀಡಾ ಕಾರ್ಯದರ್ಶಿ ಶ್ರೀನಿವಾಸ್, ರಾಜ್ಯ ಪ್ರತಿನಿಧಿ ಜನಾರ್ದನ್, ನಿರ್ದೇಶಕ ಶಮಿ ಇದ್ದರು.

Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…