More

    ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಸತೀಶ ಸಲಹೆ

    ಕುಷ್ಟಗಿ: ಅಂಗವಿಕಲರಿಗೆ ಅನುಕಂಪದ ಬದಲು ಅವಕಾಶ ನೀಡಿ ಸ್ವಾವಲಂಬಿ ಜೀವನಕ್ಕೆ ನೆರವಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಸತೀಶ ಹೇಳಿದರು.


    ಪಟ್ಟಣದ ತಹಸಿಲ್ ಕಚೇರಿಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ ನಿಮಿತ್ತ ಗುರುವಾರ ಏರ್ಪಡಿಸಿದ್ದ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಂಗವಿಕಲರೆಂಬ ತಾತ್ಸಾರ ಮನೋಭಾವ ಬೇಡ. ಸರ್ಕಾರಿ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.


    ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಚಂದ್ರಶೇಖರ ಹಿರೇಮನಿ ಮಾತನಾಡಿ, ಅಂಗವಿಕಲರ ಸ್ವಾವಲಂಬಿ ಜೀವನಕ್ಕೆ ಸರ್ಕಾರ ವಿವಿಧ ಯೋಜನೆ ಜಾರಿ ಮಾಡಿದೆ. ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಸಾಲ ಸೌಲಭ್ಯ ನೀಡಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಶೇ.5 ಅನುದಾನ ಮೀಸಲಿಡಲಾಗಿದ್ದು, ಖರ್ಚಾಗದೆ ಉಳಿದಿದೆ ಎಂದು ತಿಳಿಸಿದರು.


    ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಂಗವಿಕಲರನ್ನು ಸನ್ಮಾನಿಸಲಾಯಿತು. ವಕೀಲರ ಸಂಘದ ಕಾರ್ಯದರ್ಶಿ ಬಸವರಾಜ ಲಿಂಗಸಗೂರು ಮಾತನಾಡಿದರು. ತಹಸೀಲ್ದಾರ್ ಶ್ರುತಿ ಮಳ್ಳಪ್ಪಗೌಡ್ರ, ವಕೀಲರ ಸಂಘದ ತಾಲೂಕು ಅಧ್ಯಕ್ಷ ವಿಜಯಮಹಾಂತೇಶ ಕುಷ್ಟಗಿ, ಉಪಾಧ್ಯಕ್ಷ ಶಿವಕುಮಾರ ದೊಡ್ಡಮನಿ, ಜಂಟಿ ಕಾರ್ಯದರ್ಶಿ ಮೈನುದ್ದೀನ್ ಮುಲ್ಲಾ, ಸರ್ಕಾರಿ ಸಹಾಯಕ ಅಭಿಯೋಜಕ ಎಲ್.ರಾಯನಗೌಡ, ಗ್ರೇಡ್ 2 ತಹಸೀಲ್ದಾರ್ ಮುರುಳೀಧರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts