ಕಂಬಳಕ್ಕೆ ಪ್ರೋತ್ಸಾಹ ಧನ ನೀಡಲು ಐವನ್ ಒತ್ತಾಯ

What_is_Kambala_fac1d15b00
Published on



ಮಂಗಳೂರು : ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಸಂಘಟಿಸಲು ಪ್ರತೀ ಕಂಬಳಕ್ಕೆ 5 ಲಕ್ಷ ರೂ. ಸರ್ಕಾರದಿಂದ ಪ್ರೋತ್ಸಾಹ ಧನ ನೀಡಬೇಕು. ರಾಜ್ಯ ಕಂಬಳ ಅಸೋಸಿಯೇಶನ್ ರಚನೆ ಮಾಡಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ‘ ರಾಜ್ಯ ಸರ್ಕಾರ ಈ ಹಿಂದೆ ಕಂಬಳಕ್ಕೆ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದು, 25 ಲಕ್ಷ ರೂ ಬಿಡುಗಡೆಯಾಗಿತ್ತು. ಆದರೆ ಕೆಲವೇ ಕಂಬಳಗಳಿಗೆ ಪ್ರೋತ್ಸಾಹ ಧನ ನೀಡಲಾಗಿತ್ತು. ಕಂಬಳ ಸಂಘಟಿಸಲು ಹಣದ ಅವಶ್ಯಕತೆ ಇದ್ದುದರಿಂದ ಸಂಘಟಕರು ಜಿಲ್ಲಾಧಿಕಾರಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. 2024-25ನೇ ಸಾಲಿನಲ್ಲಿ ನಡೆಯುವ 25 ಕಂಬಳಗಳಿಗೆ ಸರ್ಕಾರದ ವತಿಯಿಂದ ತಲಾ 5ಲಕ್ಷ ರೂ.ಧನ ಸಹಾಯವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net