ಆಯೋಗದ ವರದಿ ಸರ್ಕಾರ ಒಪ್ಪಿಕೊಂಡಿಲ್ಲ

1 Min Read
ಆಯೋಗದ ವರದಿ ಸರ್ಕಾರ ಒಪ್ಪಿಕೊಂಡಿಲ್ಲ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಅದು ಸಮರ್ಪಕವಾಗಿದ್ದರೆ ಮಾತ್ರ ಮುಂದಿನ ಹೆಜ್ಜೆ ಇಡಲಾಗುವುದು. ಸರ್ಕಾರ ಇನ್ನೂ ಈ ವರದಿಯನ್ನು ಒಪ್ಪಿಕೊಂಡಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಡಿಕೆಯಂತೆ ಇದನ್ನು ಜಾತಿಗಣತಿ ಎನ್ನಲಾಗುತ್ತಿದೆ. ಆದರೆ, ಇದು ಸಾಮಾಜಿಕ, ಆರ್ಥಿಕ ಸಮೀಕ್ಷೆಯಾಗಿದೆ. ಕೇಂದ್ರ ಸರ್ಕಾರ ಜಾತಿಗಣತಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರ ಗಣತಿ ಮಾಡದ ಕಾರಣ ರಾಜ್ಯ ಸರ್ಕಾರ ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತನಿಖೆಯಿಂದ ಎಲ್ಲವೂ ಗೊತ್ತಾಗಲಿದೆ. ಒತ್ತಡ ಹಾಕುವುದರಿಂದ ಪೊಲೀಸರಿಗೆ ತೊಂದರೆಯಾಗುತ್ತದೆ. ಸತ್ಯಾಂಶ ಹೊರಗೆ ಬಂದು ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆಯಾಗಲಿದೆ ಎಂದರು.

See also  ಎಫ್‌ಸಿಐದಿಂದ ಸ್ಪರ್ಧಾತ್ಮಕ ಬೆಲೆಯಲ್ಲಿ ಅಕ್ಕಿ-ಗೋಧಿ ವಿತರಣೆ
Share This Article