More

    ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿ ಭತ್ಯೆ ಶೇ. 4 ಹೆಚ್ಚಳ!

    ನವದೆಹಲಿ: ಇತ್ತೀಚೆಗಷ್ಟೇ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳವಾಗಿದ್ದು, ಇದೀಗ ಕೇಂದ್ರ ಸರ್ಕಾರಿ ನೌಕರರಿಗೂ ಸಿಹಿ ಸುದ್ದಿ ಹೊರಬಿದ್ದಿದೆ. ಅರ್ಥಾತ್, ಕೇಂದ್ರ ಸರ್ಕಾರಿ ನೌಕರರಿಗೆ ಶೇ. 4 ತುಟ್ಟಿಭತ್ಯೆ ಹೆಚ್ಚಿಸಲಾಗಿದೆ.

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದ್ದು, ಶೇ. 4 ತುಟ್ಟಿಭತ್ಯೆ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮೂಲವೇತನ/ಪಿಂಚಣಿಯ ಶೇ.42ಕ್ಕೆ ತಲುಪಿದೆ.

    ಇದನ್ನೂ ಓದಿ: ‘ವಿಜಯಾನಂದ’ ಚಿತ್ರಕ್ಕೆ ಅತ್ಯುತ್ತಮ ಬಯೋಪಿಕ್ ಪ್ರಶಸ್ತಿ; ಒಟ್ಟು ಐದು ವಿಭಾಗಗಳಲ್ಲಿ ಪುರಸ್ಕಾರ

    2023ರ ಜ. 1ಕ್ಕೇ ಅನ್ವಯಿಸುವಂತೆ ಈ ಹೆಚ್ಚಳವನ್ನು ಮಾಡಲಾಗಿದ್ದು, ಇದರಿಂದ ಕೇಂದ್ರ ಸರ್ಕಾರದ 47.58 ಲಕ್ಷ ಉದ್ಯೋಗಿಗಳಿಗೆ ಹಾಗೂ 69.76 ಲಕ್ಷ ನಿವೃತ್ತ ನೌಕರರಿಗೆ ಪ್ರಯೋಜನವಾಗಲಿದೆ. ಏಳನೇ ಕೇಂದ್ರ ವೇತನ ಆಯೋಗದ ಶಿಫಾರಸಿನ ಮೇರೆಗೆ ಈ ಹೆಚ್ಚಳವನ್ನು ಮಾಡಲಾಗಿದೆ ಎಂದು ಪ್ರೆಸ್ ಇನ್​ಫಾರ್ಮೇಷನ್​ ಬ್ಯೂರೋ ತಿಳಿಸಿದೆ.

    ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ವಿಜಯಾನಂದ’ ಬಯೋಪಿಕ್ ಪ್ರದರ್ಶನ; ನೂರಾರು ಜನರಿಂದ ವೀಕ್ಷಣೆ, ಮೆಚ್ಚುಗೆ

    ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

    ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts