ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಶಾಹೀನ್ ಬಾಗ್ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವವರ ಜತೆ ಮಾತುಕತೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್ನಲ್ಲಿ ಕಳೆದ 50 ದಿನಗಳಿಂದಲೂ ಪ್ರತಿಭಟನೆ ನಡೆಯುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ, ಶಹೀನ್ಬಾಗ್ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಜತೆಗೆ ಮಾತುಕತೆ ನಡೆಸಲು ಸಿದ್ಧವಾಗಿದೆ. ಅವರು ಸಿಎಎ ಬಗ್ಗೆ ಏನೇ ಅನುಮಾನವಿದ್ದರೂ ನಮ್ಮ ಬಳಿಯೇ ಕೇಳಿ ಪರಿಹರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಓಖ್ಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶಾಹೀನ್ಬಾಗ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ವಿರೋಧಿಸಿ ಕಳೆದ 50 ದಿನಗಳಿಂದಲೂ ಪ್ರತಿಭಟನೆ ನಡೆಯುತ್ತಲೇ ಇದೆ.
ಈ ಮಧ್ಯೆ ಚುನಾವಣೆ ಹತ್ತಿರುವ ಬರುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 2ರಂದು ಶಾಹೀನ್ ಬಾಗ್ ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ದೊಡ್ಡ ಗೊಂದಲ ಸೃಷ್ಟಿಸಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪ ಮಾಡಿತ್ತು. ಆದರೆ ಇದೊಂದು ಅವಿವೇಕಯುತ ಆರೋಪ ಎಂದು ದೆಹಲಿ ಬಿಜೆಪಿಯ ಮಾಧ್ಯಮಗಳ ಚುನಾವಣೆಯ ಉಸ್ತುವಾರಿ ಅಶೋಕ್ ಗೋಯಲ್ ಹೇಳಿದ್ದಾರೆ.(ಏಜೆನ್ಸೀಸ್)