ಬೆಳಗಾವಿ: ಕೇಂದ್ರ ಸರ್ಕಾರ ರೈತರಿಗಾಗಿ ಸಾಕಷ್ಟು ಯೋಜನೆ ಜಾರಿ ತಂದಿದೆ. ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ ೂಡಕೆ ಹೇಳಿದರು.
ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ ಈಚೆಗೆ ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂದೇಶದ ನೇರ ಪ್ರಸಾರದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ಯಾಂಕಿನ ೇತ್ರಾಧಿಕಾರಿ ಶರಣಬಸಪ್ಪ, ಕೇಂದ್ರದ ವಿಜ್ಞಾನಿ ಎಸ್.ಎಂ.ವಾರದ ಮಾತನಾಡಿದರು. ಕೃಷಿ ವಿಜ್ಞಾನ ಕೇಂದ್ರದ ಮಂಜುನಾಥ ಪಿ.ಐ., ಬಸವರಾಜ ಅಮ್ಮಿನಬಾವಿ, ಶಂಕರಗೌಡ ಪಾಟೀಲ, ವಿಜ್ಞಾನಿ ಪ್ರವಿಣ ಯಡಹಳ್ಳಿ, ವಿನೋದ ಕೋಚಿ ಇತರರಿದ್ದರು.