ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲೇ ಕಲಿಯಬೇಕು: ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ?

blank

ಧಾರವಾಡ: ರಾಜ್ಯದಲ್ಲಿ ಪಠ್ಯಪರಿಷ್ಕರಣೆ ವಿಚಾರವಾಗಿ ಎದ್ದಿರುವ ವಿವಾದದ ನಡುವೆ ಇದೀಗ ಇನ್ನೊಂದು ವಿಚಾರ ಪ್ರಸ್ತಾಪಗೊಂಡಿದೆ. ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲೇ ಕಲಿಯುವುದು, ಜನಪ್ರತಿನಿಧಿಗಳು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯವುದು ಹಾಗೂ ಸರ್ಕಾರಿ ಉದ್ಯೋಗಿಗಳ ಮಕ್ಕಳು ಕೂಡ ಸರ್ಕಾರಿ ಶಾಲೆಯಲ್ಲೇ ಕಲಿಯಬೇಕು, ಸರ್ಕಾರಿ ಉದ್ಯೋಗಿಗಳು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು ಎಂಬಿತ್ಯಾದಿ ವಿಚಾರಗಳು ಆಗಾಗ ಪ್ರಸ್ತಾಪವಾಗುತ್ತಲೇ ಇರುತ್ತವೆ.

ಇದೀಗ ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳು ಕನ್ನಡ ಮಾಧ್ಯಮದಲ್ಲೇ ಕಲಿಯಬೇಕು ಎಂಬ ವಿಚಾರವೊಂದು ಪ್ರಸ್ತಾಪವಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಅವರು ಇಂಥದ್ದೊಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಇಂದು ಮಾತನಾಡಿದ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಆಗ ಮಾತ್ರ ಕನ್ನಡ ವಿಷಯದಲ್ಲಿ ಎಲ್ಲವೂ ಸರಿ ಹೋಗುತ್ತದೆ. ಮೊದಲು ಶಿಕ್ಷಕರ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಬಳಿಕ ರಾಜ್ಯ ಸರ್ಕಾರಿ ನೌಕರರ ಮಕ್ಕಳೂ ಕನ್ನಡದಲ್ಲೇ ಕಲಿಯಬೇಕು. ಈ ಬಗ್ಗೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಮಾಡಲಾಗುವುದು. ಆ ನಿರ್ಣಯಗಳನ್ನು ಅನುಷ್ಠಾನ ಮಾಡಿಸಬೇಕು. ಇಲ್ಲವಾದರೆ ಕನ್ನಡ ವಿಷಯ ಬಹಳ ಕಷ್ಟವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!

Share This Article

ನಿಮ್ಮ ಮಕ್ಕಳಿಗೆ ಪ್ರತಿನಿತ್ಯ ಟೀ ಕೊಡ್ತಿದ್ದೀರಾ? ಹೌದು ಎಂದಾದರೆ ಈ ವಿಚಾರಗಳು ನಿಮಗೆ ತಿಳಿದಿರಲೇಬೇಕು! Tea

Tea : ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು…

ನಿಮಗೆ ದೃಷ್ಟಿ ದೋಷವಾಗಿದ್ರೆ..ನಿಂಬೆ ಹಣ್ಣಿನಿಂದ ಹೀಗೆ ಮಾಡಿದರೆ ಸಾಕು! Drishti Dosha

Drishti Dosha: ಸಾಮಾನ್ಯವಾಗಿ ಕೆಟ್ಟ ದೃಷ್ಟಿ ಬಿದ್ದಿದೆ ಎಂಬ ಪದವನ್ನು ನಾವು ಸಾಮಾನ್ಯವಾಗಿ ಕೇಳುತ್ತಿರುತ್ತೇವೆ. ಮನೆ ವ್ಯವಹಾರ,…

ನೀವು ಈ ದಿನಾಂಕಗಳಲ್ಲಿ ಹುಟ್ಟಿದ್ದೀರಾ? ಹಾಗಾದರೆ 2025ರಲ್ಲಿ ನಿಮಗೆ ಅದೃಷ್ಟೋ ಅದೃಷ್ಟ… ಹಣದ ಸುಗ್ಗಿ ಗ್ಯಾರಂಟಿ! Numerology

Numerology : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…